ಚುನಾವಣಾ ಕಣ | ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬುಧವಾರಕ್ಕೆ ಮುಂದೂಡಿಕೆ…! |

April 10, 2023
11:03 PM

ಬಿಜೆಪಿಯ ಮೊದಲ ಪಟ್ಟಿಯ ಅಭ್ಯರ್ಥಿ ಪಟ್ಟಿಯನ್ನು ಬುಧವಾರದೊಳಗೆ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿಯ ಹಿರಿಯ ನಾಯಕರು  ನವದೆಹಲಿಯಲ್ಲಿ ಚರ್ಚೆ ನಡೆಸಿದರು. ಈ ಸಂದರ್ಭ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ನಾಯಕರು ಸಮ್ಮತಿಸದ ಕಾರಣ ಘೋಷಣೆ ಮುಂದೂಡಲಾಗಿದೆ.

ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರದೊಳಗೆ ಬಿಡುಗಡೆ ಮಾಡಲಾಗುವುದು. ಪಟ್ಟಿ ಅಂತಿಮಗೊಳಿಸುವ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದರು.

ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಮಾಡಿದ ಸಲಹೆಗಳ ಕುರಿತು ಚರ್ಚಿಸಿ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿಯ ಹಿರಿಯ ನಾಯಕರು ಇಂದು ನವದೆಹಲಿಯಲ್ಲಿ ಚರ್ಚೆ ನಡೆಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ಬೊಮ್ಮಾಯಿ, ಅವರ ಹಿಂದಿನ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯದ ಇತರ ನಾಯಕರು ಈ ಸಭೆಗಳಲ್ಲಿ ಭಾಗವಹಿಸಿದ್ದರು.

ಶಿಸ್ತಿನ ಪಕ್ಷ ಬಿಜೆಪಿಯ ಮೊದಲ ಪಟ್ಟಿ ಇನ್ನೂ ಬಿಡುಗಡೆ ಆಗದೇ ಇರುವುದಕ್ಕೆ ವಿಪಕ್ಷಗಳು ವ್ಯಂಗ್ಯವಾಡಿವೆ. ಚುನಾವಣೆಯ ಮುನ್ನಾ ದಿನವೇ ಘೋಷಣೆ ಮಾಡಬಹುದು  ಎಂದು ವ್ಯಂಗ್ಯವಾಡಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror