ಸಿದ್ದರಾಮಯ್ಯ ಅವರು ಕರ್ನಾಟಕ ಮುಖ್ಯಮಂತ್ರಿ ಎಂದು ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ. ಇದರೊಂದಿಗೆ ಕೊನೆಗೂ ಕರ್ನಾಟಕ ಸಿಎಂ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ. ಸಿಎಂ ಘೋಷಣೆಗೂ ಮುನ್ನ ಕರ್ನಾಟಕದಲ್ಲಿ ಗ್ಯಾರಂಟಿಗಳ ಬಗ್ಗೆ ನಾನಾ ಚರ್ಚೆಗಳು ನಡೆಯುತ್ತಿವೆ. ಸಿಎಂ ಗ್ಯಾರಟಿಯೇ ಆಗಿಲ್ಲ. ಈ ಗ್ಯಾರಂಟಿಗಳು ಯಾವ ಜಾರಿ ಮಾಡುತ್ತಾರೆ ಎನ್ನುವ ವ್ಯಂಗ್ಯದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel