ಕಾವೇರಿ ಕೂಗು ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸುತ್ತಿರೋದನ್ನ ಖಂಡಿಸಿ ಕರೆ ಕೊಟ್ಟಿದ್ದ ಬೆಂಗಳೂರು ಬಂದ್ ಭಾಗಶಃ ಯಶಸ್ಸಾಗಿದೆ. ಆದರೆ ರಾಜ್ಯ ಸರ್ಕಾರ ಮತ್ತೆ ತಮಿಳುನಾಡಿಗೆ ನೀರನ್ನು ಹರಿಸಿದೆ. ಇದರಿಂದ ಮತ್ತಷ್ಟು ರೊಚ್ಚಿಗೆದ್ದಿರುವ ರೈತರು, ಹಾಗೂ ರಾಜ್ಯ ಸಂಘಟನೆಗಳು ಮತ್ತೆ ಶುಕ್ರವಾರ ಅಖಂಡ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿವೆ. ಶುಕ್ರವಾರದ ಬಂದ್ ಗೆ ಈಗಾಗಲೇ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ.
ಮಂಗಳವಾರದ ಬೆಂಗಳೂರು ಬಂದ್ ಮಾಡಿದ ಮೇಲೆ ಶುಕ್ರವಾರ ಮತ್ತೆ ಸಂಪೂರ್ಣ ಕರ್ನಾಟಕ ಬಂದ್ ಆಗಲಿದೆ. ರಾಜ್ಯದ ಹಿತಕ್ಕಾಗಿ ಸೆ.29 ಶುಕ್ರವಾರ ಕರ್ನಾಟಕ ಬಂದ್ ಮಾಡಲು ತೀರ್ಮಾನಿಸಲಾಗಿದೆ ಅಂತಾ ಈಗಾಗಲೇ ಕನ್ನಡ ಒಕ್ಕೂಟ ಸಂಘಟನೆಗಳು ಘೋಷಿಸಿಕೊಂಡಿವೆ. ನಿರೀಕ್ಷೆಗೂ ಮೀರಿ ಬೆಂಗಳೂರು ಬಂದ್‍ಗೆ ಬೆಂಗಳೂರಿಗರು ಜೈ ಎಂದಿದ್ರು. ಇದೇ ರೀತಿ ಅಥವಾ ಇದಕ್ಕೂ ಹೆಚ್ಚಿನ ಯಶಸ್ಸು ಕರ್ನಾಟಕ ಬಂದ್‍ಗೆ ಸಿಗಬೇಕು ಎನ್ನುವ ಲೆಕ್ಕಾಚಾರದಲ್ಲಿ ಕನ್ನಡ ಒಕ್ಕೂಟದ ಪ್ರಮುಖರು ಅಖಾಡಕ್ಕಿಳಿದಿದ್ದಾರೆ.
ಹೀಗಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಮಂಗಳವಾರ ಬೆಂಗಳೂರು ಬಂದ್ ಆಯ್ತು. ಈಗ ಶುಕ್ರವಾರ ಕರ್ನಾಟಕ ಬಂದ್ ಆಗೋದು ನಿಶ್ಚಿತವಾಗಿದೆ. ಒಂದೇ ವಾರದಲ್ಲಿ ಎರಡೆರಡು ದಿನ ಬಂದ್ ಮಾಡೋದಕ್ಕೆ ಈ ಹಿಂದೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಮಂಗಳವಾರವೇ ಕರ್ನಾಟಕ ಬಂದ್ ಕೂಡಾ ಮಾಡಬಹುದಲ್ಲವೇ ಎಂಬ ವಾದಗಳೂ ಇದ್ದವು. ಆದರೆ ಮಂಗಳವಾರ ಬೆಂಗಳೂರು ಬಂದ್ ಹಾಗೂ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಾತ್ರ ಬಂದ್ ವಾತಾವರಣ ಕಂಡುಬಂದಿತ್ತು. ಇನ್ನು ಶುಕ್ರವಾರ ಸಂಪೂರ್ಣ ಕರ್ನಾಟಕ ಬಂದ್ ಆಗಲಿದೆ.
ಬೆಂಗಳೂರು ಬಂದ್ಗೆ ಬೆಂಬಲ ನೀಡಿದ್ದ ಕೆಲವು ಸಂಘಟನೆಗಳು ಕಡೆ ಕ್ಷಣದಲ್ಲಿ ವಾಪಾಸ್ ಪಡೆದು ಕನ್ನಡ ಒಕ್ಕೂಟ ಕರೆ ಕೊಟ್ಟಿರುವ ಕರ್ನಾಟಕ ಬಂದ್‍ಗೆ ಬೆಂಬಲವನ್ನ ಘೋಷಿಸಿದವು. ಪ್ರಮುಖವಾಗಿ ಹೋಟೆಲ್ ಅಸೋಸಿಯೇಷನ್, ಖಾಸಗಿ ವಾಹನ ಮಾಲೀಕರ ಸಂಘಟನೆಗಳು, ಒಲಾ ಊಬರ್ ಸಂಘಟನೆಗಳು ಕರ್ನಾಟಕ ಬಂದ್ ಗೆ ಸಪೋರ್ಟ್ ಮಾಡಿದ್ರು.
ಯಾರ ಬೆಂಬಲ..!?: ಓಲಾ ಉಬರ್ ಚಾಲಕರ ಸಂಘ, ಆದರ್ಶ ಆಟೋ ಯೂನಿಯನ್, ಕರ್ನಾಟಕ ಕೈಗಾರಿಕೆಗಳ ಸಂಘ, ಕರ್ನಾಟಕ ರಸ್ತೆ ಸಾರಿಗೆ ಕ್ರಿಯಾ ಸಮಿತಿ, ವಿದ್ಯಾರ್ಥಿ ಸಂಘಟನೆಗಳು, ಮಾರುಕಟ್ಟೆ ಸಂಘ, ಚಲನಚಿತ್ರ ವಾಣಿಜ್ಯ ಮಂಡಳಿ.., ಜಲಮಂಡಳಿ ನೌಕರರ ಸಂಘ, ಲಾರಿ ಮಾಲೀಕರ ಸಂಘ, ಹೋಟೆಲ್ ಅಸೋಸಿಯೇಷನ್ ಬೆಂಬಲ ಘೋಷಿಸಿವೆ. ಒಟ್ಟಿನಲ್ಲಿ ಅಖಂಡ ಕರ್ನಾಟಕ ಬಂದ್ ಗೆ ಸಾಕಷ್ಟು ಸಂಘಟನೆಗಳು ಸಾಥ್ ನೀಡಲಿವೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್ ಗೆ ತಯಾರಿ ನಡೆಸುತ್ತಿದ್ದು, ಸದ್ಯ 80 ಕ್ಕೂ ಹೆಚ್ಚು ಸಂಘಟನೆಗಳಿಂದ ಬಂದ್ ಗೆ ಸಂಪೂರ್ಣ ಬೆಂಬಲ ಸಿಕ್ಕಿದೆ.
– ಅಂತರ್ಜಾಲ ಮಾಹಿತಿ
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…