#KarnatakaBJP | ಹೈಕಮಾಂಡ್​ಗೆ ಅಚ್ಚರಿಯ ಹೆಸರು ಸೂಚಿಸಿದ ಬಿಎಸ್​ವೈ..! | ಮತ್ತೆ ದಕ್ಷಿಣ ಕನ್ನಡಕ್ಕೆ ಒಲಿಯುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ…? |

July 4, 2023
1:04 PM

ರಾಜ್ಯದಲ್ಲಿ ಚುನಾವಣೆ ನಡೆದು ಸುಮಾರು ಎರಡು ತಿಂಗಳಾಗುತ್ತಾ ಬಂತು. ಬಿಜೆಪಿ #BJP ಚುನಾವಣೆಯಲ್ಲಿ ಸೋತಿದ್ದು, ಇನ್ನೂ ತನ್ನ ಆತ್ಮಾವಲೋಕನ ಮಾಡಿಕೊಳ್ಳುವುದರಲ್ಲೇ ಇದೆ. ವಿರೋಧ ಪಕ್ಷದ ನಾಯಕನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಇನ್ನೂ ಅಂತ್ಯ ಕಂಡಿಲ್ಲ. ಯಾರನ್ನೂ ನೇಮಿಸಬೇಕು ಎನ್ನುವ ಗೊಂದಲದಲ್ಲೇ ಇದೆ. ಈ ಮಧ್ಯೆ ದೆಹಲಿಗೆ ತೆರಳಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ #BSYediyurappa ಹೈಕಮಾಂಡ್ ಮುಂದೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಚ್ಚರಿಯ ಹೆಸರನ್ನ ಸೂಚಿಸಿದ್ದಾರೆ ಎಂಬ ಮಾಹಿತಿ  ವರದಿಯಾಗಿದೆ.

Advertisement

ಯಡಿಯೂರಪ್ಪ ಸೂಚಿಸಿದ ಹೆಸರಿಗೆ ಹೈಕಮಾಂಡ್ ಬಹುತೇಕ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ವಿರೋಧ ಪಕ್ಷದ ನಾಯಕ ಹೆಸರು ಅಂತಿಮವಾಗದ ಹಿನ್ನೆಲೆ ನೂತನ ರಾಜ್ಯಾಧ್ಯಕ್ಷರ ಹೆಸರನ್ನು ತಡೆ ಹಿಡಿಯಲಾಗಿದೆ ಎಂದು ವರದಿಯಾಗಿದೆ. ಹೈಕಮಾಂಡ್ ಬುಲಾವ್ ಹಿನ್ನೆಲೆ ಜುಲೈ 2ರಂದು ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಿದ್ದರು. ಈ ವೇಳೆ ಹೈಕಮಾಂಡ್ ನಾಯಕರ ಜೊತೆ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದರು. ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ನೀಡಿದ್ರೆ, ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ಒಕ್ಕಲಿಗ ಸಮುದಾಯಕ್ಕೆ ನೀಡಬೇಕೆಂಬ ಚರ್ಚೆಗಳು ನಡೆದಿವೆ ಎನ್ನಲಾಗಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!
May 11, 2025
7:21 AM
by: ದ ರೂರಲ್ ಮಿರರ್.ಕಾಂ
ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ
May 10, 2025
7:05 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ
May 10, 2025
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group