ರಾಜ್ಯದಲ್ಲಿ ಚುನಾವಣೆ ನಡೆದು ಸುಮಾರು ಎರಡು ತಿಂಗಳಾಗುತ್ತಾ ಬಂತು. ಬಿಜೆಪಿ #BJP ಚುನಾವಣೆಯಲ್ಲಿ ಸೋತಿದ್ದು, ಇನ್ನೂ ತನ್ನ ಆತ್ಮಾವಲೋಕನ ಮಾಡಿಕೊಳ್ಳುವುದರಲ್ಲೇ ಇದೆ. ವಿರೋಧ ಪಕ್ಷದ ನಾಯಕನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಇನ್ನೂ ಅಂತ್ಯ ಕಂಡಿಲ್ಲ. ಯಾರನ್ನೂ ನೇಮಿಸಬೇಕು ಎನ್ನುವ ಗೊಂದಲದಲ್ಲೇ ಇದೆ. ಈ ಮಧ್ಯೆ ದೆಹಲಿಗೆ ತೆರಳಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ #BSYediyurappa ಹೈಕಮಾಂಡ್ ಮುಂದೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಚ್ಚರಿಯ ಹೆಸರನ್ನ ಸೂಚಿಸಿದ್ದಾರೆ ಎಂಬ ಮಾಹಿತಿ ವರದಿಯಾಗಿದೆ.
ಯಡಿಯೂರಪ್ಪ ಸೂಚಿಸಿದ ಹೆಸರಿಗೆ ಹೈಕಮಾಂಡ್ ಬಹುತೇಕ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ವಿರೋಧ ಪಕ್ಷದ ನಾಯಕ ಹೆಸರು ಅಂತಿಮವಾಗದ ಹಿನ್ನೆಲೆ ನೂತನ ರಾಜ್ಯಾಧ್ಯಕ್ಷರ ಹೆಸರನ್ನು ತಡೆ ಹಿಡಿಯಲಾಗಿದೆ ಎಂದು ವರದಿಯಾಗಿದೆ. ಹೈಕಮಾಂಡ್ ಬುಲಾವ್ ಹಿನ್ನೆಲೆ ಜುಲೈ 2ರಂದು ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಿದ್ದರು. ಈ ವೇಳೆ ಹೈಕಮಾಂಡ್ ನಾಯಕರ ಜೊತೆ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದರು. ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ನೀಡಿದ್ರೆ, ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ಒಕ್ಕಲಿಗ ಸಮುದಾಯಕ್ಕೆ ನೀಡಬೇಕೆಂಬ ಚರ್ಚೆಗಳು ನಡೆದಿವೆ ಎನ್ನಲಾಗಿದೆ.
ಯಾರಾಗ್ತಾರೆ ರಾಜ್ಯಾಧ್ಯಕ್ಷ? : ತಮ್ಮ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರನ್ನು ಯಡಿಯೂರಪ್ಪ ಸೂಚಿಸಿದ್ದಾರೆ. ಮುಂದೆ ಲೋಕಸಭಾ ಚುನಾವಣೆ ಇರುವುದರಿಂದ ಪ್ರಬಲ ರಾಜ್ಯಾಧ್ಯಕ್ಷರು ಬೇಕು ಎಂದು ಬಿಎಸ್ವೈ ಹೇಳಿದ್ದಾರೆ ಎಂಬುದು ವರದಿ. ಮೊದಲ ಬಾರಿಗೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅಂದಿನ ಸರ್ಕಾರದ ಮೇಲೆ ಶೋಭಾ ಕರಂದ್ಲಾಜೆ ಪ್ರಬಲ ಹಿಡಿತ ಹೊಂದಿದ್ದರು. ರಾಜ್ಯ ಸರ್ಕಾರದಲ್ಲಿಯೂ ಕೆಲಸ ಮಾಡಿದ ಅನುಭವವನ್ನು ಶೋಭಾ ಕರಂದ್ಲಾಜೆ ಹೊಂದಿದ್ದಾರೆ.
ಚುನಾವಣೆ ಸೋಲಿನ ಬಳಿಕ ಬಿಎಲ್ ಸಂತೋಷ್ ಬಣ ನಿಷ್ಕ್ರಿಯಗೊಂಡ ಬೆನ್ನಲ್ಲೇ ಯಡಿಯೂರಪ್ಪ ಮತ್ತು ಅವರ ಬಣ ಸಕ್ರಿಯವಾಗಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗಷ್ಟೇ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಮತ್ತು ಶೋಭಾ ಕರಂದ್ಲಾಜೆ ಸಭೆ ನಡೆಸಿದ್ದಾರೆ ಎಂಬುದು ವರದಿ. ಈ ಸಭೆಯಲ್ಲಿ ಎಲ್ಲರೂ ಒಟ್ಟಾಗಿ ಹೋಗುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…