ಸಿಎಂ ಸಿದ್ದರಾಮಯ್ಯ ಬಜೆಟ್ #Budget ಮಂಡಿಸುತ್ತಿದ್ದಾರೆ. ಗ್ಯಾರಂಟಿ ಭಾರಗಳನ್ನು ಇಳಿಸಲು ತೆರಿಗೆ ಮೊರೆ ಹೋಗಿರುವುದು ಗೋಚರಿಸುತ್ತಿದೆ. ಬಜೆಟ್ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಬಜೆಟ್ ಆರಂಭಿಸಿದರು.
ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಆದರೆ ರಾಜ್ಯದ ಅನ್ನದಾತರಿಗೆ (Farmers) ನೆರವು ಯೋಜನೆಯತ್ತ ಮನಸ್ಸು ಮಾಡಿದ್ದಾರೆ. ಬಡ್ಡಿ ರಹಿತ ಸಾಲದ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. 3 ಲಕ್ಷದಿಂದ 5 ಲಕ್ಷದವರೆಗೆ ಈ ಮಿತಿಯನ್ನು ಹೆಚ್ಚಳ ಮಾಡಲಾಗಿದೆ.
5 ಗ್ಯಾರಂಟಿ #GuaranteeScheme ಯೋಜನೆಯನ್ನು ಜಾರಿ ಮಾಡಲು ಸರ್ಕಾರ ಅಬಕಾರಿ ಸುಂಕವನ್ನು #ExerciseDutty ಏರಿಸಿದೆ. ಈ ಮೂಲಕ ಮಧ್ಯಪ್ರಿಯರ ಜೇಬಿಗೆ ಕತ್ತರಿ ಹಾಕಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಲಿ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲಿ ಹೆಚ್ಚುವರಿ 20% ಅಬಕಾರಿ ಸುಂಕ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185% ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. 2023-24ರ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಸರ್ಕಾರ ನಿಗದಿಮಾಡಿದೆ.
ಕೃಷಿ ಸವಾಲು, ಕೃಷಿ ಕಷ್ಟ, ಕೃಷಿ ಇನ್ನು ಸಾಧ್ಯವೇ ಇಲ್ಲ ಎನ್ನುವ ನೆಗೆಟಿವ್…
7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಆಧಾರ್ ದೃಢೀಕರಣವನ್ನು ಬಳಸಿಕೊಂಡು ಚಾರ್ ಧಾಮ್ ಮತ್ತು…
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ…
ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಗಮನದಲ್ಲಿಟ್ಟುಕೊಂಡು ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ…
ಬೇಸಿಗೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ನೀಗಿಸಲು ಪ್ರಮುಖ ಜಲಾಶಯಗಳ ನಿರ್ವಹಣೆ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490