ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ(Budget) ರೈತರಿಗೆ(Farmer) ಭರಪೂರ ಅನುದಾನ, ಯೋಜನೆಗಳ ನಿರೀಕ್ಷೆಯಲ್ಲಿ ರಾಜ್ಯದ ಜನತೆ ಇದ್ದಾರೆ. ಹಣಕಾಸು ಸಚಿವರೂ(Finance Minister) ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramayya) ಫೆಬ್ರವರಿ 16ರಂದು 2024-25ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ(Agricultural sector) ಆದ್ಯತೆ ನೀಡಬೇಕು ಎಂದು ರೈತರು ‘ಬೆಂಗಳೂರು ಚಲೋ'(Bengaluru Chalo) ಹಮ್ಮಿಕೊಂಡಿದ್ದರು. ಬಜೆಟ್‌ನಲ್ಲಿ ಕೃಷಿ ಕ್ಷೇತ್ರ, ರೈತರ ಬೇಡಿಕೆಗಳೇನು? ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಈ ಕುರಿತು ಕುರುಬೂರು ಶಾಂತಕುಮಾರ್ ರಾಜ್ಯಾಧ್ಯಕ್ಷರು, ರಾಜ್ಯ ಕಬ್ಬು ಬೆಳೆಗಾರ ಸಂಘ, ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕರ್ನಾಟಕ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.
ರೈತರ ಬೇಡಿಕೆಗಳ ಪಟ್ಟಿ
* ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರವೇ ರೈತರ ಸಾಲ ಮನ್ನಾ ಮಾಡಿದೆ ಅದೇ ರೀತಿ ರಾಜ್ಯದಲ್ಲಿಯೂ ಸಾಲ ಮನ್ನಾ ಆಗಬೇಕು.
* ಕಬ್ಬಿನ ಎಫ್.ಆರ್.ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು. ಈಗಾಗಲೇ ಕಬ್ಬು ಕಟಾವು, ಸಾಗಣಿಕೆ ದರ ಸಕ್ಕರೆ ಕಾರ್ಖಾನೆಗಳು ಮನಬಂದಂತೆ ಕಡಿತ ಮಾಡಿ ರೈತರನ್ನು ವಂಚಿಸುತ್ತಿವೆ ಈಗಾಗಲೇ ಕಡಿತ ಮಾಡಿರುವ ಹೆಚ್ಚುವರಿ ಹಣ ರೈತರಿಗೆ ವಾಪಸ್ ಕೊಡಿಸಬೇಕು.
* 2022- 23ರ ಸಾಲಿನಲ್ಲಿ ಎಫ್.ಆರ್.ಪಿ. ಮೇಲೆ ಕಬ್ಬಿಗೆ ಟನೆ 150 ಹೆಚ್ಚುವರಿ ದರ ನಿಗದಿ ಮಾಡಿ ಆದೇಶ ಹೊರಡಿಸಿರುವುದನ್ನು ಸಕ್ಕರೆ ಕಾರ್ಖಾನೆಗಳು ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು, ಇಲ್ಲವೇ ಸರ್ಕಾರವೇ ರೈತರಿಗೆ ಪಾವತಿಸಬೇಕು.
* ಬರಗಾಲ ಪೀಡಿತ ಪ್ರದೇಶದ ರೈತರಿಗೆ ನೀರು ಬಿಡದೆ, ತಮಿಳುನಾಡಿಗೆ ನೀರು ಹರಿಸಿ ಕಾವೇರಿ ಅಚ್ಚುಕಟ್ಟು ರೈತರಿಗೆ ವಂಚನೆ ಮಾಡಿರುವ ಸರ್ಕಾರ ರೈತರಿಗೆ ಕೂಡಲೇ ಎಕರೆಗೆ 25,000 ಪರಿಹಾರ ನೀಡಬೇಕು.
* ರೈತರು ಬೆಳೆದ ಎಲ್ಲಾ ಪೌಷ್ಟಿಕ ಸಿರಿಧಾನ್ಯಗಳನ್ನು ಉತ್ಪಾದನಾ ವೆಚ್ಚಕ್ಕೆ ಬೆಂಬಲ ಬೆಲೆ ಹೆಚ್ಚುವರಿ ಬೆಲೆ ನಿಗದಿ ಮಾಡಿ ಸರ್ಕಾರವೇ ಕಡ್ಡಾಯವಾಗಿ ಖರೀದಿಸುವಂಥ ವ್ಯವಸ್ಥೆ ಜಾರಿಗೆ ಬರಬೇಕು, ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಖರೀದಿಸಿ, ಸರ್ಕಾರದ ಅಂಗಸಂಸ್ಥೆಗಳಾದ ಆಸ್ಪತ್ರೆ, ವಿದ್ಯಾರ್ಥಿ ನಿಲಯ, ಜೈಲುಗಳಿಗೆ, ಪೂರೈಸುವ ವ್ಯವಸ್ಥೆ ಮಾಡಬೇಕು.
* ರೈತರ ಎಲ್ಲಾ ಬೆಳೆಗಳಿಗೆ ಬೆಳೆ ವಿಮೆ ಜಾರಿಯಾಗಬೇಕು, ಬೆಳೆವಿಮೆ ಪದ್ಧತಿ ಕೆಲವು ನೀತಿಗಳು ಬದಲಾಗಬೇಕು. ಅತಿವೃಷ್ಟಿ ಪ್ರಕೃತಿ ವಿಕೋಪ ಬೆಳೆನಷ್ಟಕ್ಕೆ ಪರಿಹಾರ ವೈಜ್ಞಾನಿಕವಾಗಿ ಸಂಪೂರ್ಣ ನಷ್ಟ ಸಿಗುವಂತಾಗಬೇಕು.
* ಕೃಷಿ ಸಾಲ ನೀತಿ ಬದಲಾಗಬೇಕು, ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬಡ್ಡಿ ರಹಿತ ಸಾಲ ನೀಡುವಂತೆ ಆಗಬೇಕು. ಎಲ್ಲಾ ರೈತರಿಗೂ ಕೇವಲ ಪಹಣಿ ಪತ್ರ ಆಧರಿಸಿ ಕನಿಷ್ಠ 5 ಲಕ್ಷ ಆಧಾರರಹಿತ ಬಡ್ಡಿ ಇಲ್ಲದ ಸಾಲ ಕೊಡಿಸುವ ಯೋಜನೆ ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಜಾರಿಯಾಗಬೇಕು.
* ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಮೇಳಗಳನ್ನು ಆಚರಿಸುವಾಗ ರಾಷ್ಟ್ರೀಯ ರೈತ ದಿನದಂದು ಆಚರಿಸಬೇಕು, ಡಿಸೆಂಬರ್ 23ರಂದು, ದಿವಂಗತ ಎಂ.ಡಿ.ಎನ್. ಹೆಸರಿನಲ್ಲಿ ರೈತರ ರೈತ ದಿನವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕು.
* ಸಕ್ಕರೆ ಕಾರ್ಖಾನೆಗಳ ಹಾಗೂ ಕಟಾವು ಕೂಲಿ ಕಾರ್ಮಿಕರ ಸಮಸ್ಯೆ ತಪ್ಪಿಸಲು ಎನ್‌ಆರ್ ಇಜಿ ಯೋಜನೆಯ ಕಬ್ಬು ಕಟಾವು ಹಾಗೂ ಬಿತ್ತನೆಗೆ ಬಳಸಿಕೊಳ್ಳಲು ಯೋಜನೆಗೆ ಸೇರಿಸಬೇಕು. ಬಾಳೆ ಬೆಳೆಗೆ ಪ್ರೋತ್ಸಾಹ ಧನ ನೀಡುವ ರೀತಿ.
* ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿ ತೋರಿಸುವ ಮಾನದಂಡ ಬದಲಾಗಬೇಕು ಇಳುವರಿ ಮೋಸ ತಪ್ಪಿಸಲು ವೈಜ್ಞಾನಿಕ ಮಾನದಂಡ ಅಳವಡಿಸಬೇಕು. ಕಬ್ಬಿನ ಎಥನಾಲ್ ಉತ್ಪಾದನಾ ಲಾಭದ ಆದಾಯವನ್ನು ಕಬ್ಬು ದರ ನಿಗದಿಯಲ್ಲಿ ಪರಿಗಣಿಸಬೇಕು.
* ಕಬ್ಬಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಬೆಂಕಿ ಅನಾಹುತವಾದಾಗ ಸುಟ್ಟು ಹೋದ ಕಬ್ಬಿಗೆ ಯಾವುದೇ ಮಾನದಂಡವಿಲ್ಲದೆ ಕಾರ್ಖಾನೆಗಳು ಕಬ್ಬಿನ ಹಣದಲ್ಲಿ ಶೇಕಡ 25ರಷ್ಟು ಕಡಿತ ಮಾಡುವುದನ್ನು ಕೈ ಬಿಟ್ಟು ಎಫ್. ಆರ್.ಪಿ. ಹಣ ರೈತರಿಗೆ ಪೂರ್ತಿ ಪಾವತಿ ಆಗಬೇಕು.
* ಕೃಷಿ ಉತ್ಪನ್ನಗಳಿಗೆ ಎ.ಪಿ.ಎಂ.ಸಿ.ಯಲ್ಲಿ ಅಡಮಾನ ಸಾಲ ಯೋಜನೆ ಸದೃಢಗೊಳಿಸಬೇಕು. ರೈತರಿಗೆ ಅನುಕೂಲವಾಗುವ ಈ ಯೋಜನೆಗೆ ಹೆಚ್ಚು ಅನುದಾನ ಮೀಸಲಿಡಬೇಕು.
* ಕೃಷಿಗೆ ಬಳಸುವ ಕೀಟನಾಶಕ, ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು, ಟ್ಯಾಕ್ಟರ್ ಬಿಡಿಭಾಗಗಳ ಜಿ.ಎಸ್.ಟಿ. ತೆರಿಗೆ ರದ್ದುಗೊಳಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು.
* ಕಾಡಂಚಿನ ಪ್ರಾಣಿಗಳ ಹಾವಳಿಯಿಂದ ರೈತರ ಬೆಳೆಗಳು ರೈತರ ಜೀವನ ನಾಶವಾಗುತ್ತಿರುವುದನ್ನು ತಪ್ಪಿಸಲು ಸ್ಥಳೀಯ ಗ್ರಾಮ ಪಂಚಾಯಿತಿಗಳಿಗೆ ಅಧಿಕಾರ ನೀಡಿ ಯೋಜನೆ ರೂಪಿಸಬೇಕು ಪರಿಹಾರ ಮನದಂಡ ಹೆಚ್ಚಳ ಮಾಡಬೇಕು. ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ 8 ಲಕ್ಷಕ್ಕೂ ಹೆಚ್ಚು ಬಗರ್ ಹುಕ್ಕುಂ ಸಾಗುವಳಿ ರೈತರಿಗೆ ಸಾಗುವಳಿ ಪತ್ರ ನೀಡಬೇಕು.
* ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ರದ್ದಾಗಬೇಕು.
– ಅಂತರ್ಜಾಲ ಮಾಹಿತಿ
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…