ಈ ಬಾರಿಯ ಬಜೆಟ್‌ನಲ್ಲಿ ನೀರಾವರಿ ಯೋಜನೆಗಳಿಗೆ ಸಾಕಷ್ಟು ಅನುದಾನ ಮೀಸಲಿಡಲಾಗಿದೆ. ಮೇಕೆದಾಟು ಯೋಜನೆಗೆ ಸಿಎಂ 1000 ಕೋಟಿ ರೂ ಹಾಗೂ ಕೃಷ್ಣಾ ಮೇಲ್ದಂಡೆ 3 ನೇ ಹಂತಕ್ಕೆ 5 ಸಾವಿರ ಕೋಟಿ ರೂಪಾಯಿ, ಕಳಸಾ ಬಂಡೂರಿ ಯೋಜನೆಗೆ 1 ಸಾವಿರ ಕೋಟಿ ರೂಪಾಯಿ, ಎತ್ತಿನಹೊಳೆ ಯೋಜನೆಯ ಎರಡನೇ ಹಂತದ ಕಾಮಗಾರಿಗೆ 3 ಸಾವಿರ ಕೋಟಿ ರೂ ಅನುದಾನವನ್ನು ಸಿಎಂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಗೆ ಸಾಕಷ್ಟು ವಿರೋಧಗಳು ಇದ್ದವು. ಎತ್ತಿನ ಹೊಳೆ ಯೋಜನೆ ರದ್ದು ಮಾಡುವಂತೆ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲು ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಅನೇಕರು ಪ್ರತಿಭಟನೆ, ಹೋರಾಟ ನಡೆಸಿದ್ದರು. ಮಂಗಳೂರಿನಿಂದ ಪಾದಯಾತ್ರೆ, ಗುಂಡ್ಯದಲ್ಲಿ ಪ್ರತಿಭಟನಾ ಸಭೆ, ಎತ್ತಿನಹೊಳೆಗೆ ಕಾಲ್ನಡಿಗೆ ಕೂಡಾ ನಡೆದಿತ್ತು. ಇದೀಗ ಮತ್ತೆ ಎರಡನೇ ಹಂತದ ಕಾಮಗಾರಿಗೆ ಬಜೆಟಲ್ಲಿ ಅನುದಾನ ಮೀಸಲಿಡಲಾಗಿದೆ.
ಮೇಕೆ ದಾಟು ವಿಚಾರದಲ್ಲೂ ಕಾಂಗ್ರೆಸ್ ಪ್ರತಿಭಟನೆ, ಪಾದಯಾತ್ರೆ ನಡೆಸುತ್ತಿರುವಂತೆಯೇ ಇದೀಗ ಬಜೆಟಲ್ಲಿ 1000 ಕೋಟಿ ರೂಪಾಯಿ ಮೀಸಲಿಡಲಾಗಿದೆ.