ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರಾವಳಿ ಭಾಗದಲ್ಲಿ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಆದರೆ ಪ್ರತಿಭಟನಾ ಸಭೆಗಳು ನಡೆದವು. ಉತ್ತರ ಕರ್ನಾಟಕದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕರ್ನಾಟಕ ಬಂದ್ ಗೆ ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಒಟ್ಟಾಗಿ ಐಕ್ಯ ಹೋರಾಟ ಸಮಿತಿ ಹೆಸರಿನಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದರು. ಈ ಬಂದ್‌ಗೆ ಕಾಂಗ್ರೆಸ್, ಜೆಡಿಎಸ್, ಸಿಪಿಐ(ಎಂ) ಪಕ್ಷಗಳು ಬೆಂಬಲ ನೀಡಿದ್ದವು. ಇದರ ಜೊತೆಗೆ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣ, ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, ಕನ್ನಡಪರ ಹೋರಾಟಗಾರ ಸಾ.ರಾ. ಗೋವಿಂದು ಕೂಡಾ ಬೆಂಬಲ ವ್ಯಕ್ತಪಡಿಸಿದ್ದರು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾದರೆ ಪ್ರತಿಭಟನಾ ಸಭೆಗಳು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ನಡೆದವು.
ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ರೈತ ವಿರೋಧಿ ಕಾಯಿದೆ ರದ್ದು ಮಾಡಿ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಮೆಜೆಸ್ಟಿಕ್‌ನಲ್ಲಿ ಕತ್ತೆಯ ಮೇಲೆ ಸವಾರಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಮೈಸೂರಿನಲ್ಲಿ ಬಂದ್ ಗೆ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಪ್ರತಿಭಟನಾಕಾರರಿಂದ ಹೆದ್ದಾರಿ ತಡೆ ನಡೆಯಿತು. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿ ಎಸ್ ಯಡಿಯೂರಪ್ಪ ಅವರ ಅಣಕು ಶವ ಯಾತ್ರೆಯನ್ನು ಪ್ರತಿಭಟನಾಕಾರರು ನಡೆಸಿದರು.
ಉಳಿದಂತೆ ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ ಮೊದಲಾದ ಕಡೆ ಪ್ರತಿಭಟನೆ ನಡೆದರೆ ಶಿವಮೊಗ್ಗ, ಮಡಿಕೇರಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿ ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ವಿರೋಧಿಸಿ ಪ್ರತಿಭಟನೆ ನಡೆಯಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…