Advertisement
ಸುದ್ದಿಗಳು

ಕೃಷಿ ಮಸೂದೆಗೆ ವಿರೋಧ | ಕರ್ನಾಟಕ ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ

Share

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರಾವಳಿ ಭಾಗದಲ್ಲಿ  ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಆದರೆ ಪ್ರತಿಭಟನಾ ಸಭೆಗಳು ನಡೆದವು. ಉತ್ತರ ಕರ್ನಾಟಕದಲ್ಲಿ  ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕರ್ನಾಟಕ ಬಂದ್‌ ಗೆ  ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಒಟ್ಟಾಗಿ ಐಕ್ಯ ಹೋರಾಟ ಸಮಿತಿ  ಹೆಸರಿನಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದರು. ಈ ಬಂದ್‌ಗೆ ಕಾಂಗ್ರೆಸ್, ಜೆಡಿಎಸ್, ಸಿಪಿಐ(ಎಂ) ಪಕ್ಷಗಳು ಬೆಂಬಲ ನೀಡಿದ್ದವು.  ಇದರ ಜೊತೆಗೆ  ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣ, ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, ಕನ್ನಡಪರ ಹೋರಾಟಗಾರ ಸಾ.ರಾ. ಗೋವಿಂದು ಕೂಡಾ ಬೆಂಬಲ ವ್ಯಕ್ತಪಡಿಸಿದ್ದರು.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಂದ್‌ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾದರೆ ಪ್ರತಿಭಟನಾ ಸಭೆಗಳು ಎಲ್ಲಾ ತಾಲೂಕು ಕೇಂದ್ರಗಳಲ್ಲಿ  ನಡೆದವು.

ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.  ರೈತ ವಿರೋಧಿ ಕಾಯಿದೆ ರದ್ದು ಮಾಡಿ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್  ಮೆಜೆಸ್ಟಿಕ್‌ನಲ್ಲಿ ಕತ್ತೆಯ ಮೇಲೆ ಸವಾರಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಮೈಸೂರಿನಲ್ಲಿ ಬಂದ್‌ ಗೆ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಉತ್ತರ ಕನ್ನಡ ಜಿಲ್ಲೆಯ  ಕಾರವಾರದಲ್ಲಿ ಪ್ರತಿಭಟನಾಕಾರರಿಂದ ಹೆದ್ದಾರಿ ತಡೆ ನಡೆಯಿತು. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿ ಎಸ್ ಯಡಿಯೂರಪ್ಪ‌ ಅವರ ಅಣಕು ಶವ ಯಾತ್ರೆಯನ್ನು ಪ್ರತಿಭಟನಾಕಾರರು ನಡೆಸಿದರು.

ಉಳಿದಂತೆ ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ ಮೊದಲಾದ ಕಡೆ ಪ್ರತಿಭಟನೆ ನಡೆದರೆ ಶಿವಮೊಗ್ಗ, ಮಡಿಕೇರಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿ ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ವಿರೋಧಿಸಿ ಪ್ರತಿಭಟನೆ ನಡೆಯಿತು.

 

ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಪ್ರತಿಕ್ರಿಯೆ ನೀಡಿ, ಭೂಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆಗಳು ರೈತ ಪರವಾಗಿವೆ. ಇದರಲ್ಲಿ  ರೈತರಿಗೆ ವಿರೋಧವಾಗುವ ಅಂಶಗಳಿಲ್ಲ, ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

7 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

14 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

14 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

14 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

1 day ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago