ರೈತ ಸಂಘಟನೆಗಳಿಂದ ಸೆ.28 ರಂದು ಬಂದ್‌ ಗೆ ಕರೆ | ಹೇಗಿರುತ್ತದೆ ಬಂದ್‌ ?

September 27, 2020
10:32 AM

ಕೇಂದ್ರ ಸರ್ಕಾರದಿಂದ ರೈತ ವಿರೋಧಿ ಕಾಯಿದೆ ಜಾರಿ ವಿರೋಧಿಸಿ ಸೆ.28  ರಂದು ರಾಜ್ಯದ ರೈತ ಸಂಘಟನೆಗಳು ಹಾಗೂ ಹಾಗೂ ಕಾರ್ಮಿಕ ಸಂಘಟನೆಗಳು ಕರ್ನಾಟಕ ಬಂದ್‌ ಗೆ ಕರೆ ನೀಡಿವೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ ನಡೆಯಲಿದೆ.

ಎಪಿಎಂಸಿ ಹಾಗೂ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತಪರ ಸಂಘಟನೆಗಳು ಹಾಗೂ ಕಾರ್ಮಿಕ ಸಂಘಟನೆಗಳಿಂದ ನಾಳೆ ರಾಜ್ಯ ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕ ಬಂದ್ ಗೆ 40 ಕ್ಕೂ ಹೆಚ್ಚು ಸಂಘಟನೆಗಳು ಸದ್ಯ ಬೆಂಬಲ ನೀಡಿದೆ.

Advertisement

ಬಂದ್‌ ಹೀಗಿರುತ್ತದೆ...
ಬಂದ್ ವೇಳೆ ಹಾಲು, ಹಣ್ಣು, ತರಕಾರಿ, ಮೆಡಿಕಲ್ , ಆಸ್ಪತ್ರೆ ಸೇವೆಗಳಿಗೆ ಅವಕಾಶ ಇದೆ. ಹೋಟೆಲ್ ಗಳು, ಬಾರ್ ಮತ್ತು ರೆಸ್ಟೋರೆಂಟ್ ಗಳು, ಎಂದಿನಂತೆ ಓಪನ್ ಇರಲಿದ್ದು, ಕೆಎಸ್‌ಆರ್ ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿದೆ. ಸದ್ಯದ ಮಾಹಿತಿ ಪ್ರಕಾರ ಟ್ಯಾಕ್ಸಿಗಳು ಕೆಲವು ಕಡೆ ಓಡಾಟ ನಡೆಸುವುದಿಲ್ಲ. ಖಾಸಗಿ ಬಸ್‌, ಲಾರಿ ಸೇವೆ ಬಂದ್‌ ಇರಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತ, ದಲಿತ, ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟದ ಆಶ್ರಯದಲ್ಲಿ ಬಂಟ್ವಾಳ ಮತ್ತು ಸುಳ್ಯದಲ್ಲಿ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಸಲಾಗುವುದು ಎಂದು ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್‌ ಪುಣಚ ತಿಳಿಸಿದ್ದಾರೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror