ಮುಂದಿನ ಭವಿಷ್ಯ ಕಟ್ಟಿಕೊಳ್ಳಲು ಚಾತಕ ಪಕ್ಷಿಯಂತೆ ಎದೆ ಹಿಡಿದುಕೊಂಡು ಕಾಯುತ್ತಿದ್ದ ವಿದ್ಯಾರ್ಥಿಗಳ ಸಿಇಟಿ ಫಲಿತಾಶ ಇಂದು ಪ್ರಕಟಗೊಂಡಿದೆ. 2023-24ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು(ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ ಎಂದು ಮಾಹಿತಿ ನೀಡಿದರು.
ನ್ಯಾಚೂರೋಪತಿ ಟಾಪರ್ : ನ್ಯಾಚೂರೋಪತಿ ಹಾಗೂ ಯೋಗದಲ್ಲಿ ಪ್ರತೀಕ್ಷಾ ಟಾಪ್ ಆಗಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಕುಮಾರನ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಪ್ರತೀಕ್ಷಾ, 98.661 ಅಂಕ ಪಡೆದು ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾಳೆ.
ಕೃಷಿ ವಿಜ್ಞಾನ ವಿಭಾಗದಲ್ಲಿ ಬೈರೇಶ್ಗೆ ಮೊದಲ ರ್ಯಾಂಕ್: ಅಗ್ರಿಕಲ್ಚರ್(ಕೃಷಿ ವಿಜ್ಞಾನ )ವಿಭಾಗದಲ್ಲಿ ಬೈರೇಶ್ ಎಸ್ ಎಚ್ ಮೊದಲ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಮಂಗಳೂರಿ ಎಕ್ಸ್ ಪರ್ಟ್ ಯುನಿವರ್ಸಿಟಿ ಕಾಲೇಜ್ ವಿದ್ಯಾರ್ಥಿಯಾಗಿರುವ ಬೈರೇಶ್, ಕ್ವಾಲಿಫಿಕೇಷನ್ನಲ್ಲಿ 99.75 ಅಂಕ, ಸಿಟಿಟಿಯಲ್ಲಿ 93.75 ಅಂಕ ಪಡೆದು ಮೊದಲ ರ್ಯಾಂಕ್ ಪಡೆದಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 20 ಹಾಗೂ 21ರಂದು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ, ನ್ಯಾಚುರೋಪತಿ, ಡಿ ಫಾರ್ಮ ಕೋರ್ಸ್ ಹಾಗೂ ಬಿಎಸ್ಸಿ ನರ್ಸಿಂಗ್ಗೆ ಪ್ರವೇಶ ಪರೀಕ್ಷೆ ನಡೆಸಿತ್ತು. ಒಟ್ಟು 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.ವೆಬ್ಸೈಟ್ನಲ್ಲಿ ಬೆಳಗ್ಗೆ 11 ಗಂಟೆ ನಂತರ ಫಲಿತಾಂಶ ಲಭ್ಯವಾಗಲಿದೆ.
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…