Advertisement
ಸುದ್ದಿಗಳು

ಸಿಇಟಿ ಫಲಿತಾಂಶ ಪ್ರಕಟ, ಬಾಲಕಿಯರದ್ದೇ ಮೇಲುಗೈ |

Share

ಮುಂದಿನ ಭವಿಷ್ಯ ಕಟ್ಟಿಕೊಳ್ಳಲು ಚಾತಕ ಪಕ್ಷಿಯಂತೆ ಎದೆ ಹಿಡಿದುಕೊಂಡು ಕಾಯುತ್ತಿದ್ದ ವಿದ್ಯಾರ್ಥಿಗಳ ಸಿಇಟಿ ಫಲಿತಾಶ ಇಂದು ಪ್ರಕಟಗೊಂಡಿದೆ. 2023-24ನೇ ಸಾಲಿನ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು(ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ ಎಂದು ಮಾಹಿತಿ ನೀಡಿದರು.

  • ಇಂಜಿನಿಯರಿಂಗ್ ಕೋರ್ಸಿಗೆ- 2,03,381
  • ಕೃಷಿ ವಿಜ್ಞಾನ ಕೋರ್ಸಿಗೆ- 1,64,187
  • ಪಶುಸಂಗೋಪನೆ- 166756
  • ಯೋಗ ಮತ್ತು ನ್ಯಾಚುರೋಪತಿ ಗೆ- 2,06191
  • ಬಿ.ಪಾರ್ಮ್ ಮತ್ತು ಡಿ.ಪಾರ್ಮ್ ಕೋರ್ಸ್ ಗೆ- 2,06,340
  • ನರ್ಸಿಂಗ್ ಕೋರ್ಸಿಗೆ – 1,66,808 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ

ನ್ಯಾಚೂರೋಪತಿ ಟಾಪರ್​ : ನ್ಯಾಚೂರೋಪತಿ ಹಾಗೂ ಯೋಗದಲ್ಲಿ ಪ್ರತೀಕ್ಷಾ ಟಾಪ್ ಆಗಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಕುಮಾರನ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಪ್ರತೀಕ್ಷಾ, 98.661 ಅಂಕ ಪಡೆದು ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾಳೆ.

ಕೃಷಿ ವಿಜ್ಞಾನ ವಿಭಾಗದಲ್ಲಿ ಬೈರೇಶ್​ಗೆ ಮೊದಲ ರ‍್ಯಾಂಕ್‌: ಅಗ್ರಿಕಲ್ಚರ್(ಕೃಷಿ ವಿಜ್ಞಾನ )ವಿಭಾಗದಲ್ಲಿ ಬೈರೇಶ್ ಎಸ್ ಎಚ್ ಮೊದಲ ರ‍್ಯಾಂಕ್‌ ಪಡೆದುಕೊಂಡಿದ್ದಾರೆ. ಮಂಗಳೂರಿ ಎಕ್ಸ್ ಪರ್ಟ್ ಯುನಿವರ್ಸಿಟಿ ಕಾಲೇಜ್ ವಿದ್ಯಾರ್ಥಿಯಾಗಿರುವ ಬೈರೇಶ್, ಕ್ವಾಲಿಫಿಕೇಷನ್​ನಲ್ಲಿ 99.75 ಅಂಕ, ಸಿಟಿಟಿಯಲ್ಲಿ 93.75 ಅಂಕ ಪಡೆದು ಮೊದಲ ರ್ಯಾಂಕ್ ಪಡೆದಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 20 ಹಾಗೂ 21ರಂದು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ, ನ್ಯಾಚುರೋಪತಿ, ಡಿ ಫಾರ್ಮ ಕೋರ್ಸ್​ ಹಾಗೂ ಬಿಎಸ್ಸಿ ನರ್ಸಿಂಗ್​ಗೆ ಪ್ರವೇಶ ಪರೀಕ್ಷೆ ನಡೆಸಿತ್ತು. ಒಟ್ಟು 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.ವೆಬ್​ಸೈಟ್​ನಲ್ಲಿ ಬೆಳಗ್ಗೆ 11 ಗಂಟೆ ನಂತರ ಫಲಿತಾಂಶ ಲಭ್ಯವಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…

6 hours ago

ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು

ಕುಟುಂಬದ ನಿಜವಾದ ಶ್ರೀಮಂತಿಕೆ ಹಣ, ಸ್ಥಾನಮಾನ ಅಥವಾ ವೈಭವದಲ್ಲಿಲ್ಲ; ಪರಸ್ಪರ ಗೌರವ, ನಂಬಿಕೆ…

6 hours ago

ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ

ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು…

7 hours ago

ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿಯುವ ಮುನ್ನವೇ ಮಳೆಯ ವಾತಾವರಣದಲ್ಲಿ ಬದಲಾವಣೆಯ ಲಕ್ಷಣಗಳು…

12 hours ago

ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ

ಜಿಐ ಮಾನ್ಯತೆ ಪಡೆದ ‘ಗುಲ್ಬರ್ಗಾ ತೊಗರಿ ಬೇಳೆ’ಯನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಲು ಕೇಂದ್ರ…

16 hours ago

ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ

ನಾಗರಿಕ ಪ್ರಜ್ಞೆ ಎಂದರೆ ಕಾನೂನಿನ ಭಯದಿಂದ ನಿಯಮ ಪಾಲಿಸುವುದಷ್ಟೇ ಅಲ್ಲ; ಇತರರ ಹಕ್ಕು,…

16 hours ago