ರಾಜ್ಯದ ಎಲ್ಲಾ ರಾಸಾಯನಿಕ ಕಾರ್ಖಾನೆಗಳ ಮೇಲೆ ಹೆಚ್ಚಿನ ನಿಗಾವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಘಟಕ (ಎನ್‌ಸಿಬಿ) ಇತ್ತೀಚೆಗೆ ಮೈಸೂರಿನಲ್ಲಿ ನಡೆಸಿದ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ನಡೆಯುತ್ತಿರುವ ಭದ್ರತಾ ಪರಿಶೀಲನೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಭಾಗವಾಗಿ, ಸಂಶಯಾಸ್ಪದ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ಇದೇ ವೇಳೆ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಹರಿದಾಡುತ್ತಿರುವ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಡಾ. ಪರಮೇಶ್ವರ್, “ಹೈಕಮಾಂಡ್ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದೆ. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ” ಎಂದು ಹೇಳಿದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…