ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ಬಹುತೇಕ ಅಂತ್ಯವಾಗಿದ್ದು, ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದಿದೆ. ಗುರುವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ರಾಜ್ಯಪಾಲ ಥೋವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.
ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿಕೆ ಶಿವಕುಮಾರ್ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು ಎಐಸಿಸಿ ಮುಂದಾಗಿದೆ. ಅಷ್ಟೇ ಅಲ್ಲದೇ ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ ಶಿವಕುಮಾರ್ ಅವರೇ ಮುಂದುವರಿಯುವ ಸಾಧ್ಯತೆಯಿದೆ.
ಪೂರ್ಣಾವಧಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ 50:50 ಸೂತ್ರದ ಅಧಿಕಾರ ಹಂಚಿಕೆಗೆ ಸಿದ್ದರಿದ್ದಾರೆ. 2 ವರ್ಷದ ಅವಧಿಗೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವುದು ಮತ್ತು ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸುವುದು.
ಲೋಕಸಭಾ ಚುನಾವಣೆಯ ನಂತರವೂ ಒಂದು ವರ್ಷ ಅವರನ್ನು ಮುಂದುವರಿಸಿ ಕೊನೆಯ ಮೂರು ವರ್ಷ ಡಿಕೆಶಿ ಅವರಿಗೆ ಸಿಎಂ ಪಟ್ಟ ನೀಡಿ 2028ರಲ್ಲಿ ಡಿಕೆಶಿ ಮೂಲಕ ಚುನಾವಣೆ ಎದುರಿಸುವ ಅವಕಾಶ ನೀಡಲು ಹೈಕಮಾಂಡ್ ಮುಂದಾಗಿದೆ. ಆ ಚುನಾವಣೆ ಗೆದ್ದರೆ ಡಿಕೆಶಿ ಮತ್ತೆ 5 ವರ್ಷ ಸಿಎಂ ಆಗಿ ಮುಂದುವರಿಯಬಹುದು ಎಂಬ ಸೂತ್ರವನ್ನು ಇಬ್ಬರು ನಾಯಕರ ಮುಂದಿಟ್ಟಿದೆ.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…