ಚುನಾವಣೆ ಮುಗಿದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ ಮಾಡಿದ್ದಾರೆ.
ಸೋಮವಾರ ತಮ್ಮ ಬೆಂಬಲಿಗರ ಜೊತೆ ದೆಹಲಿಗೆ ಬಂದಿರುವ ಸಿದ್ದರಾಮಯ್ಯ ರಾಜಕೀಯ ಒತ್ತಡದ ಮಧ್ಯೆ ತಮ್ಮ ಆಪ್ತ ಶಾಸಕರ ಜೊತೆ ರಾತ್ರಿ ಡಿನ್ನರ್ ಮಾಡಿದ್ದಾರೆ. ಎಂ.ಬಿ.ಪಾಟೀಲ್, ಜಮೀರ್, ಬೈರತಿ ಸುರೇಶ್, ಅನಿಲ್ ಚಿಕ್ಕಮಾಧು, ಕೆ.ಜೆ.ಜಾರ್ಜ್, ಪುತ್ರ ಯತೀಂದ್ರ ಸಾಥ್ ನೀಡಿದ್ದಾರೆ.
ಈ ವೇಳೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿದ್ದರಾಮಯ್ಯ ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಪ್ರವಾಸಕ್ಕೆ ತೆರಳಿದ ಸೋನಿಯಾ ಗಾಂಧಿ ಇಂದು ದೆಹಲಿ ಆಗಮಿಸಲಿದ್ದಾರೆ. ಇಂದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸಮ್ಮುಖದಲ್ಲೇ ಖರ್ಗೆ ನಿವಾಸದಲ್ಲೇ ಬ್ಯಾಲೆಟ್ ಬಾಕ್ಸ್ ತೆರೆಯಲಾಗುತ್ತದೆ. ಶಾಸಕರು ಯಾರಿಗೆ ಹೆಚ್ಚು ಒಲವು ವ್ಯಕ್ತಪಡಿಸಿದ್ದಾರೋ ಅವರಿಗೆ ಸಿಎಂ ಪಟ್ಟ ಸಿಗುವ ಸಾಧ್ಯತೆಯಿದೆ. ಇದಾದ ಬಳಿಕ ಇಬ್ಬರ ಜೊತೆ ಸಂಧಾನ ಸಭೆ ನಡೆದು ಸಿಎಂ ಯಾರಾಗಬೇಕು ಎಂಬ ನಿರ್ಧಾರ ಅಂತಿಮವಾಗಲಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…