ಮುಂದುವರಿದ ಸಿಎಂ ಫೈಟ್; ನನ್ನ ಬಳಿ 135 ಶಾಸಕರು ಇದ್ದಾರೆಂದ ಡಿಕೆ ಶಿವಕುಮಾರ್

May 15, 2023
4:40 PM

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದ ನಂತರದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಮುಂದುವರಿದಿದೆ. ಈ ಮಧ್ಯೆ, ಬಾಗಲೂರು ಬಳಿಯ ಫಾರ್ಮ್​ಹೌಸ್​ನಲ್ಲಿ ಡಿಕೆ ಶಿವಕುಮಾರ್ ಹಾಗೂ ಬೆಂಬಲಿಗರು ಸಭೆ ನಡೆಸಿದ್ದಾರೆ. ಅಲ್ಲಿ ಮಾತನಾಡಿದ ಶಿವಕುಮಾರ್, ಸಿಎಂ ಹುದ್ದೆಗೆ ಎಲ್ಲರೂ ಆಸೆ ಪಡಲಿ. ಆದರೆ, ನಾವು ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಅಂಗೀಕರಿಸಿದ್ದೇವೆ. ಯಾವ ಶಾಸಕರು ಏನು ಮಾಡಿದ್ದರೋ ನನಗೆ ಗೊತ್ತಿಲ್ಲ. ನನ್ನ ಬಳಿ 135 ಶಾಸಕರು ಇದ್ದಾರೆ. 135 ಶಾಸಕರನ್ನು ಸೋನಿಯಾ ಗಾಂಧಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದಾರೆ.

Advertisement
Advertisement

ಬಳಿಕ ಅವರು ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದಾರೆ. ಈ ಬೆಳವಣಿಗೆಯ ಮಧ್ಯೆಯೇ, ಬೆಂಗಳೂರು ನಗರದಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಸಭೆ ನಡೆಸಿದ್ದಾರೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಸಿ ಸಭೆ ನಡೆಸಲಾಗಿದೆ.

ಮತ್ತೊಂದೆಡೆ, ಸಿದ್ದರಾಮಯ್ಯ ಅವರು ಡಾ.ಯತೀಂದ್ರ, ಜಮೀರ್ ಅಹ್ಮದ್​ ಜತೆ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಅವರು ಹೈಕಮಾಂಡ್ ಜತೆ ಮಾತುಕತೆ ನಡೆಸಲಿದ್ದಾರೆ.

ಭಾನುವಾರ ರಾತ್ರಿ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್​ನಲ್ಲಿ ನಡೆದ ಕಾಂಗ್ರೆಸ್ ಶಾಶಕಾಂಗ ಪಕ್ಷದ ಸಭೆಯು ಮುಖ್ಯಮಂತ್ರಿ ಆಯ್ಕೆ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರುವಲ್ಲಿ ವಿಫಲವಾಗಿತ್ತು. ಬಳಿಕ ಎಐಸಿಸಿ ವೀಕ್ಷಕರು ಶಾಸಕರ ವೈಯಕ್ತಿಕ ಮೌಖಿಕ ಅಭಿಪ್ರಾಯ ಸಂಗ್ರಹಿಸಿದ್ದು ಅದನ್ನು ಹೈಕಮಾಂಡ್​ಗೆ ಕಳಿಹಿಸಿಕೊಟ್ಟಿದ್ದರು.

ಎಐಸಿಸಿಯ ಮೂವರು ವೀಕ್ಷಕರಾದ ಸುಶೀಲ್​ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್​ ಹಾಗೂ ದೀಪಕ್ ಬಬಾರಿಯಾ ಸಭೆಯಲ್ಲಿ ಭಾಗವಹಿಸಿದ್ದರು. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ಈಗ ಅಧಿಕಾರಕ್ಕಾಗಿ ಗೊಂದಲ ಮಾಡಿಕೊಳ್ಳುವುದು ಬೇಡ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸೋಣ. ಉಳಿದಿದ್ದನ್ನು ಹೈಕಮಾಂಡ್​ಗೆ ಬಿಡೋಣ ಎಂದು ವೀಕ್ಷಕರು ಹೇಳಿದ್ದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ
May 21, 2025
10:38 PM
by: The Rural Mirror ಸುದ್ದಿಜಾಲ
ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ
May 21, 2025
10:31 PM
by: The Rural Mirror ಸುದ್ದಿಜಾಲ
ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ
May 21, 2025
10:25 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ
May 21, 2025
10:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group