ಮುಖ್ಯಮಂತ್ರಿ ಆಯ್ಕೆ ಇನ್ನಷ್ಟು ಕಗ್ಗಂಟಾಗಿದೆ. ಮಧ್ಯಾಹ್ನದ ವೇಳೆ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಹಾಗೂ ಡಿಸಿಎಂ ಆಗಿ ಡಿ ಕೆ ಶಿವಕುಮಾರ್ ಅಂತಿಮ ಆಯ್ಕೆ ಆಗಿದ್ದರೂ ಈ ಸಂಧಾನ ಮಾತುಕತೆಯೂ ವಿಫಲವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಂದಿಟ್ಟಿದ್ದಾರೆ.
ಇಂದು ರಾಹುಲ್ ನಿವಾಸಕ್ಕೆ ಸಿದ್ದರಾಮಯ್ಯ ಆಗಮಿಸಿದ್ದರು. ಮಾತುಕತೆ ಯಶಸ್ವಿಯಾದ ಬೆನ್ನಲ್ಲೇ ಬೆಂಬಲಿಗರ ಜೊತೆ ಸಿದ್ದರಾಮಯ್ಯ ಕಾರಿನಲ್ಲಿ ರಾಹುಲ್ ನಿವಾಸದಿಂದ ತೆರಳಿದರು. ತೆರಳುವ ಸಂದರ್ಭದಲ್ಲಿ ಸಿದ್ದು ಬೆಂಬಲಿಗರು ವಿಕ್ಟರಿ ಚಿಹ್ನೆ ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಭೇಟಿಯ ಬಳಿಕ ರಾಹುಲ್ ನಿವಾಸಕ್ಕೆ ಡಿಕೆಶಿ ಆಗಮಿಸಿದರು. ಮಾತುಕತೆಯ ವೇಳೆ ಎಐಸಿಸಿಯ ಸಂಧಾನಕ್ಕೆ ಸೂತ್ರಕ್ಕೆ ಒಪ್ಪದ ಡಿಕೆ ನನಗೆ ಸಿಎಂ ಪಟ್ಟ ಕೊಡಲೇಬೇಕೆಂದು ಪಟ್ಟು ಹಿಡಿದರು.
ಚುನಾವಣೆಗೂ ಮೊದಲು ಸಿಎಂ ಅಭ್ಯರ್ಥಿ ಯಾರು ಎಂಬುದನ್ನು ಘೋಷಣೆ ಮಾಡಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆದ ಕಾರಣ ಅಧಿಕಾರಕ್ಕೆ ಏರಲು ಎಲ್ಲರ ಶ್ರಮವಿದೆ. ಕೊನೆಯ ಮೂರು ವರ್ಷ ನಾನು ಸಿಎಂ ಆಗಲು ಸಾಧ್ಯವಿಲ್ಲ. ಈಗಾಗಲೇ ಸಿದ್ದರಾಮಯ್ಯ ಒಂದು ಬಾರಿ ಮುಖ್ಯಮಂತ್ರಿ ಪಟ್ಟ ಏರಿದ್ದಾರೆ. ಈ ಬಾರಿ ನನಗೆ ಒಂದು ಅವಕಾಶ ನೀಡಿ. ಒಂದು ವೇಳೆ ನನಗೆ ಸಿಗದೇ ಇದ್ದರೆ ಪಕ್ಷದ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಪಟ್ಟ ನೀಡಿ. ಖರ್ಗೆ ಅವರಿಗೆ ಸಿಎಂ ಪಟ್ಟ ನೀಡಿದರೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಡಿಕೆಶಿ ರಾಹುಲ್‌ಗೆ ಮುಂದೆ ಹೊಸ ಸೂತ್ರವನ್ನು ಮುಂದಿಟ್ಟಿದ್ದಾರೆ. ಸಿದ್ದರಾಮಯ್ಯನವರಿಗೆ ಸಿಎಂ ಪಟ್ಟ ನೀಡಿದರೆ ನನಗೆ ಡಿಸಿಎಂ ಪಟ್ಟ ಬೇಡ. ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಬೇಡ. ನಾನು ಸರ್ಕಾರದ ಭಾಗವಾಗಿ ಇರಲ್ಲ. ಕೇವಲ ಶಾಸಕನಾಗಿಯೇ ಮುಂದುವರೆಯುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.
ಸುಮಾರು ಒಂದೂವರೆ ಗಂಟೆಗಳ ರಾಹುಲ್ ಸಂಧಾನ ಮಾಡಿದರೂ ಡಿಕೆಶಿ ಒಪ್ಪಲೇ ಇಲ್ಲ. ಒಂದು ವೇಳೆ ಮಾಡಿದರೆ ನನ್ನನ್ನು ಸಿಎಂ ಮಾಡಿ ಇಲ್ಲದೇ ಇದ್ದರೇ ಖರ್ಗೆ ಅವರನ್ನು ಮಾಡಿ ಎಂದು ನೇರವಾಗಿ ಖಂಡಾತುಂಡವಾಗಿ ಹೇಳಿದ್ದಾರೆ. ಆದರೆ ಈ ಸೂತ್ರಕ್ಕೆ ಸರಿಯಾದ ಸ್ಪಂದನೆ ಸಿಗದ ಕಾರಣ ರಾಹುಲ್ ಗಾಂಧಿ ಸಂಧಾನ ವಿಫಲವಾಗಿದೆ. ಸಂಧಾನ ವಿಫಲವಾದ ಬೆನ್ನಲ್ಲೇ ಡಿಕೆ ಶಿವಕುಮಾರ್ ನೇರವಾಗಿ ಖರ್ಗೆ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸುತ್ತಿದ್ದಾರೆ.
ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…
ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…
ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…