Advertisement
MIRROR FOCUS

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

Share

ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ಬೇರೆಡೆಗೆ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕರಾವಳಿ ಮತ್ತು ಮಲೆನಾಡು ಭಾಗಕ್ಕೆ ಅನ್ವಯವಾಗುವಂತೆ ಪ್ರವಾಸೋದ್ಯಮ ನೀತಿಯನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ನೀತಿ ರೂಪಿಸಲಾಗಿದೆ ಎಂದು ಹೇಳಿದರು.

ಕರಾವಳಿ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳು, ಬ್ಯಾಂಕುಗಳು ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳು ನಿರ್ಮಾಣವಾಗಿದ್ದು, ಅವುಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ. ರಾಜ್ಯದ 327 ಕಿಲೋಮೀಟರ್ ಉದ್ದದ ಕರಾವಳಿ ಪ್ರದೇಶವನ್ನು ಗೋವಾ ಮತ್ತು ಕೇರಳದ ಮಾದರಿಯಲ್ಲಿ ಪ್ರವಾಸೋದ್ಯಮಕ್ಕೆ ಬಳಸಿಕೊಳ್ಳಲು ಸರ್ಕಾರ ಉದ್ದೇಶಿಸಿದೆ ಎಂದು ತಿಳಿಸಿದರು.

ಮಂಗಳೂರು, ಉಡುಪಿ ಹಾಗೂ ಕಾರವಾರ ಭಾಗಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಕರಾವಳಿಯ ಕಡಲತೀರಗಳು, ಧಾರ್ಮಿಕ ಕೇಂದ್ರಗಳು ಹಾಗೂ ಸಾಂಸ್ಕೃತಿಕ ವೈವಿಧ್ಯವನ್ನು ಪ್ರವಾಸೋದ್ಯಮದೊಂದಿಗೆ ಜೋಡಿಸುವ ಮೂಲಕ ಸ್ಥಳೀಯವಾಗಿ ಉದ್ಯೋಗ ಮತ್ತು ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಮಂಗಳೂರಿನಲ್ಲಿ ತಿರುಪತಿ ದೇವಾಲಯ ಟ್ರಸ್ಟ್ ವತಿಯಿಂದ ದೇವಾಲಯ ನಿರ್ಮಿಸಲು ಜಾಗ ಕೇಳಲಾಗಿದ್ದು, ಇದಕ್ಕಾಗಿ 10 ಎಕರೆ ಜಮೀನು ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಕರಾವಳಿ ಭಾಗದ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ, ಕಟೀಲು ಹಾಗೂ ಧರ್ಮಸ್ಥಳಗಳು ಪ್ರವಾಸೋದ್ಯಮದ ಪ್ರಮುಖ ಕೇಂದ್ರಗಳಾಗಿವೆ. ಇದರ ಜೊತೆಗೆ ವೆಂಕಟರಮಣ ದೇವಾಲಯಕ್ಕೆ ಅನುಕೂಲವಾಗುವಂತೆ ಜಮೀನು ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಕೊಡಗು ಜಿಲ್ಲೆಯ ಐತಿಹಾಸಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಶೌರ್ಯದ ಪರಂಪರೆಯನ್ನು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ಉಲ್ಲೇಖಿಸಿದರು. ಕೊಡಗಿನ ಪ್ರತಿ ಮನೆಯಲ್ಲೂ ವೀರರನ್ನು ರೂಪಿಸಿದ ಇತಿಹಾಸವಿದ್ದು, ಅದನ್ನು ಮರೆಯಲು ಸಾಧ್ಯವಿಲ್ಲ ಎಂದರು.

The Karnataka government has formulated a tourism policy for the coastal and Malnad regions with the aim of creating local employment and reducing migration for jobs, Chief Minister D.K. Shivakumar said. The policy seeks to promote tourism across Karnataka’s 327-km coastline, with Mangaluru, Udupi and Karwar identified for increased tourism activity, while religious and cultural destinations will also receive greater focus.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

6 minutes ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

13 minutes ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

23 minutes ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

17 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

24 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

1 day ago