ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

May 17, 2026
7:48 PM
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ಮುಲ್ಕಿಯಲ್ಲಿ ಗರಿಷ್ಠ 7 ಸೆಂ.ಮೀ ಮಳೆಯಾಗಿದೆ.

ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮಳೆಯ ಚಟುವಟಿಕೆ ಚುರುಕುಗೊಂಡಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹಾಗೂ ಬಿರುಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಮೀನುಗಾರರಿಗೆ ಮಹತ್ವದ ಮುನ್ನೆಚ್ಚರಿಕೆ ನೀಡಿದೆ. ಇಂದು ಹಾಗೂ ನಾಳೆ ಕರಾವಳಿ ಸಮುದ್ರ ಪ್ರದೇಶಗಳಲ್ಲಿ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಸಲಹೆ ನೀಡಿದೆ.

ರಾಜ್ಯದ ಹಲವು ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 7 ಸೆಂ.ಮೀ ಮಳೆಯಾಗಿದೆ. ಹಾವೇರಿಯಲ್ಲಿ 5 ಸೆಂ.ಮೀ, ಮೂಡಬಿದ್ರೆ, ಶಿವಮೊಗ್ಗ, ಹುಂಚದಕಟ್ಟೆ, ಕೊಟ್ಟಿಗೆಹಾರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಉಪ್ಪಿನಂಗಡಿ, ಪುತ್ತೂರು, ಸುಳ್ಯ, ಶೃಂಗೇರಿ ಹಾಗೂ ಭಾಗಮಂಡಲ ಭಾಗಗಳಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಮತ್ತೊಂದೆಡೆ, ಉತ್ತರ ಕರ್ನಾಟಕದ ಬಿಸಿಲಿನ ತಾಪಮಾನ ಇನ್ನೂ ಕಡಿಮೆಯಾಗಿಲ್ಲ, ಕಲಬುರಗಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಗರಿಷ್ಠ 42.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಹವಾಮಾನ ಇಲಾಖೆ ಪ್ರಕಾರ ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮುಂದುವರಿದ ಮಳೆಯ ಸಾಧ್ಯತೆ ಇದೆ. ವಿಶೇಷವಾಗಿ ಸಂಜೆ ಮತ್ತು ರಾತ್ರಿ ವೇಳೆ ಗುಡುಗು, ಮಿಂಚು ಸಹಿತ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಇನ್ನೊಂದೆಡೆ, ಬೆಂಗಳೂರು ಸುತ್ತಮುತ್ತ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ 33 ಹಾಗೂ ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The India Meteorological Department has warned fishermen not to venture into the sea as strong winds and rough sea conditions are likely along the Karnataka coast over the next two days. Several parts of coastal and interior Karnataka received moderate rainfall, with Mulki recording the highest rainfall of 7 cm, while Kalaburagi remained the hottest place in the state at 42.4°C.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror