ರಾಜ್ಯದ ಒಂದೆರೆಡು ಕಡೆ ಮಳೆಯಾಗಿದೆ. ಅತೀ ಕನಿಷ್ಠ ತಾಪಮಾನ 10.4 ಡಿಗ್ರಿ ಸೆಲ್ಸಿಯಸ್ ಬೀದರ್‌ನಲ್ಲಿ ದಾಖಲಾಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಶೀತ ಅಲೆಯ ಪ್ರಮಾಣ ಹೆಚ್ಚಾಗಿದ್ದು, ಹವಮಾನ ಇಲಾಖೆ 4 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಮಂಜುಮುಸುಕಿದ ವಾತಾವರಣದ ಜೊತೆ ತುಂತುರು ಮಳೆಯೂ ಇರಲಿದೆ. ಕಳೆದ ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಗೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ. ಸಿ ಎಸ್ ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು, ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ನಾಳೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

