ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ ಹೇಳಿದ್ದಾರೆ.
ಮೈಸೂರಿನ ಕೆಂಪಿಸಿದ್ದಯ್ಯನಹುಂಡಿ ಸಿದ್ದರಾಮಯ್ಯ ಜೊತೆ ರಮ್ಯಾ ಪ್ರಚಾರ ಆರಂಭ ಮಾಡಿದ ನಟಿ ಇದೇ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ಒಂದು ದಿನ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತೇನೆ. ಇನ್ನೆರಡು ದಿನಗಳು ಬೆಂಗಳೂರು ನಗರ, ಬಿಜಾಪುರ ಹಾಗೂ ಬಾಗಲಕೋಟೆಯಲ್ಲಿ ಪ್ರಚಾರ ಮಾಡುವುದಾಗಿ ಹೇಳಿದರು.
ಸಿದ್ದರಾಮಯ್ಯ ಈಗಾಗಲೇ ರಾಜ್ಯದ ಅಭಿವೃದ್ದಿಗೆ ಶ್ರಮಿಸಿದ್ದಾರೆ. ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಲು ಬಂದಿದ್ದೇನೆ. ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಬಂದಿರೋದು ಸಂತಸವಾಗ್ತಿದೆ. ಜನರನ್ನ ನೋಡಿದ್ರೆ ಖುಷಿಯಾಗುತ್ತೆ. ಪಕ್ಷ ಇನ್ನೂ ಅನೇಕ ಕಡೆ ಪ್ರಚಾರ ಮಾಡಬೇಕಾದ ಜವಬ್ದಾರಿಯನ್ನು ನನಗೆ ನೀಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಶಿವಮೊಗ್ಗ, ಬಿಜಾಪುರ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…