ಚುನಾವಣೆ ಮುಗಿಯುವವರೆಗೂ ಲಿಂಗಾಯತ ದಾಳ ಬಳಸಿ: ಶಾ ತಾಕೀತು

April 22, 2023
8:48 AM

ಚುನಾವಣೆ ಹೊತ್ತಲ್ಲಿ ರಾಜಕಾರಣಿಗಳಿಗೆ ಹೊಸ ಅಸ್ತ್ರ ಸಿಕ್ಕಿದೆ. ಅದುವೇ ಲಿಂಗಾಯತ ಸಿಎಂ ಅಸ್ತ್ರ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ಬಿಜೆಪಿ ವಿರುದ್ಧ ನೇರಾನೇರ ಸಮರ ನಡೆಯುತ್ತಿದೆ.

ಚುನಾವಣೆ ಸಮಯದದಲ್ಲಿ ಇದು ಬಿಜೆಪಿಗೆ ಟೆನ್ಷನ್ ಹೆಚ್ಚಿಸಿದ್ದು ಲಿಂಗಾಯತರ ಕಡೆಗಣನೆ ಆರೋಪದಿಂದ ಚುನಾವಣೆ ಹೊಡೆತದ ಆತಂಕ ಎದುರಾಗಿದೆ. ಈ ಲಿಂಗಾಯತ ಸಿಎಂ ಟೆನ್ಷನ್ ವಿಚಾರಕ್ಕೆ ಅಮಿತ್ ಶಾ ತಮ್ಮದೇ ಆದ ಸೂತ್ರವೊಂದನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ರಾಜ್ಯ ನಾಯಕರ ಜೊತೆ ನಡೆಸಿದ ಸಭೆಯಲ್ಲಿ ಲಿಂಗಾಯತ ಕಡೆಗಣನೆ ಅಸ್ತ್ರ ಎದುರಿಸಲು ರಾಜ್ಯ ನಾಯಕರಿಗೆ ಅಮಿತ್ ಶಾ ತಂತ್ರವನ್ನು ರವಾನಿಸಿದ್ದಾರೆ. ಈ ಲಿಂಗಾಯತ ದಾಳವನ್ನು ಚುನಾವಣೆ ಮುಗಿಯುವವರೆಗೂ ಬಳಕೆ ಮಾಡುವಂತೆ ತಾಕೀತು ಮಾಡಿದ್ದಾರೆ.

ಶಾ ತಂತ್ರಗಾರಿಕೆ:
ಲಿಂಗಾಯತ ಸಿಎಂ ದಾಳ ಕಡೆಯವರೆಗೂ ಇರಿಸಿಕೊಳ್ಳಿ. ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‍ಗಿಂತಲೂ ಬಿಜೆಪಿಯ ಕೊಡುಗೆಯೇ ಹೆಚ್ಚಿದ್ದು, ಕಾಂಗ್ರೆಸ್ ಕಣ್ಣು ಒರೆಸುವ ತಂತ್ರಗಳಿಂದ ಸಮಯ ಸಾಧಕ ಆಟವಾಡುತ್ತಿದೆ.

ಈವರೆಗೆ ಇಬ್ಬರು ಲಿಂಗಾಯತ ಸಮುದಾಯದವರಿಗೆ ಸಿಎಂ ಸ್ಥಾನ ನೀಡಿದ್ದು ಮಾತ್ರವಲ್ಲದೇ ಅತೀ ಹೆಚ್ಚು ಟಿಕೆಟ್ ನೀಡಿ ಅತೀ ಹೆಚ್ಚು ಶಾಸಕರನ್ನು ಮಂತ್ರಿಗಳನ್ನಾಗಿ ಮಾಡಿದೆ.

ಬಿಜೆಪಿ ಲಿಂಗಾಯತ ನಾಯಕರಿಗೆ ಸೂಕ್ತ ಸ್ಥಾನಮಾನ, ಗೌರವ, ಪದವಿ ಅವಕಾಶ ಕೊಟ್ಟಿದ್ದರೆ ಕಾಂಗ್ರೆಸ್ ಒಬ್ಬರಿಗೂ ಸಿಎಂ ಹುದ್ದೆ ಕೊಟ್ಟಿಲ್ಲ. ಸಿಎಂ ಆಗಿದ್ದ ವಿರೇಂದ್ರ ಪಾಟೀಲರನ್ನು ಕಾಂಗ್ರೆಸ್ ಹೀನಾಯವಾಗಿ ನಡೆಸಿಕೊಂಡು ಕೇವಲ ಒಂಭತ್ತೇ ತಿಂಗಳಿಗೆ ಸಿಎಂ ಹುದ್ದೆ ಕಿತ್ತುಕೊಂಡು ಅಪಮಾನ ಮಾಡಿತ್ತು.

ಲಕ್ಷ್ಮಣ ಸವದಿ ಚುನಾವಣೆಯಲ್ಲಿ ಸೋತಿದ್ದರೂ ಪರಿಷತ್‌ಗೆ ಆಯ್ಕೆ ಮಾಡಿ ಡಿಸಿಎಂ ಮಾಡಲಾಗಿತ್ತು. ಜಗದೀಶ್ ಶೆಟ್ಟರ್‌ ಅವರಿಗೆ ಎಲ್ಲ ಪದವಿ ನೀಡಿ ಸಿಎಂ ಹುದ್ದೆಯನ್ನು ನೀಡಿ ಗೌರವ ನೀಡಲಾಗಿತ್ತು. ಪಕ್ಷದಲ್ಲಿ ಎಲ್ಲ ಸ್ಥಾನಮಾನ ಅನುಭವಿಸಿದವರು ಈಗ ಪಕ್ಷದ್ರೋಹ ಮಾಡಿ ಹೋಗಿದ್ದಾರೆ. ಈ ವಿಚಾರವನ್ನು ಮನವರಿಕೆ ಮಾಡಿ ಜಾಗೃತಿ ಮೂಡಿಸಿ ಮತದಾರರ ಗೊಂದಲವನ್ನು ತಪ್ಪಿಸಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror