ಸಿ.ಟಿ ರವಿ ಬಿಜೆಪಿ ಮುಳುಗಿಸುವ ಕೆಲಸ ಮಾಡುತ್ತಿದ್ದಾರೆ : ಎಂ.ಪಿ ಕುಮಾರಸ್ವಾಮಿ ಕಿಡಿ

April 13, 2023
2:23 PM

ಸಿ.ಟಿ ರವಿ ಬಿಜೆಪಿಯನ್ನು ಮುಳುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮೂಡಿಗೆರೆ  ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಕಿಡಿಕಾರಿದರು.

ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನನಗೆ ಟಿಕೆಟ್ ಕೈತಪ್ಪುವಂತೆ ಮಾಡಿರುವುದರ ಹಿಂದೆ ಸಿ.ಟಿ. ರವಿ ಕೈವಾಡ ಇದೆ. ಬಿಜೆಪಿ ಸಿ.ಟಿ ರವಿಯನ್ನು ನಂಬಿಕೊಂಡು ಹೋದರೆ ಮುಂದಿನ ದಿನಗಳಲ್ಲಿ ಅನುಭವಿಸುತ್ತದೆ. ಸಿಟಿ ರವಿ ಓದ್ಕೊಂಡು ಬಂದಿಲ್ಲ. ಸಂಘ ಪರಿವಾರದ ಜೊತೆ ಇದ್ದು ಮಾತನಾಡುವುದನ್ನು ಕಲಿತುಕೊಂಡಿದ್ದಾನೆ ಎಂದು ವಾಗ್ದಾಳಿ ನಡೆಸಿದರು.

ಹೈಕಮಾಂಡ್‍ಗೆ ನನ್ನ ಬಗ್ಗೆ ತಪ್ಪು ವರದಿ ಕೊಟ್ಟಿದ್ದಾರೆ. ವೈಯಕ್ತಿಕ ಕಾರಣಕ್ಕೆ ರಾಜಕಾರಣ ಮಾಡುತ್ತಿದ್ದಾರೆ. ಕೆಲ ರಾಜ್ಯ ನಾಯಕರೇ ಇದಕ್ಕೆ ಕಾರಣ. ಸಿಟಿ ರವಿ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಿ ತಿಳಿದಿದೆ. ಹೈಕಮಾಂಡ್ ಮುಂದೆ ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಟಿಕೆಟ್ ತಪ್ಪಿಸಿದ್ದಾರೆ. ಬಿಜೆಪಿ ಮುಗಿಸುವವರೆಗೂ ಸಿ.ಟಿ ರವಿ ವಿಶ್ರಾಂತಿ ಪಡೆಯುವುದಿಲ್ಲ. ಪಕ್ಷಕ್ಕೆ ಇದು ಮುಂದೇ ಗೊತ್ತಾಗುತ್ತದೆ ಎಂದು ಗುಡುಗಿದರು.

ಯಡಿಯೂರಪ್ಪ ಸ್ವಿಚ್ ಆಫ್ ಮಾಡಿದ್ರೆ ಬಿಜೆಪಿಗೆ 50 ಸೀಟ್ ಬರುವುದಿಲ್ಲ. ಟಿಕೆಟ್ ಕೈ ತಪ್ಪಿದ ಬಳಿಕ ಯಾವ ಒಬ್ಬ ನಾಯಕರು ಕರೆ ಮಾಡಿ ಮಾತನಾಡಿಲ್ಲ. ನಾನೇ ಸಿಎಂ ಭೇಟಿ ಮಾಡಿದ್ದೆ, ಸಿಎಂ ಅವರು ಮಾತನಾಡಿದ ದಾಟಿಯಿಂದಾಗಿ ನನಗೆ ಟಿಕೆಟ್ ಇಲ್ಲ ಎನ್ನುವುದು ಖಚಿತವಾಗಿತ್ತು ಎಂದು ಕಿಡಿಕಾರಿದ ಅವರು, ಶಾಸಕ ಭವನದಿಂದ ಹೊರಟರು. ಈ ವೇಳೆ ಶಾಸಕನಾಗಿಯೇ ಮರಳಿ ಬರೋದಾಗಿ ಶಪಥ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror