ಸಿ.ಟಿ ರವಿ ಬಿಜೆಪಿಯನ್ನು ಮುಳುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಕಿಡಿಕಾರಿದರು.
ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನನಗೆ ಟಿಕೆಟ್ ಕೈತಪ್ಪುವಂತೆ ಮಾಡಿರುವುದರ ಹಿಂದೆ ಸಿ.ಟಿ. ರವಿ ಕೈವಾಡ ಇದೆ. ಬಿಜೆಪಿ ಸಿ.ಟಿ ರವಿಯನ್ನು ನಂಬಿಕೊಂಡು ಹೋದರೆ ಮುಂದಿನ ದಿನಗಳಲ್ಲಿ ಅನುಭವಿಸುತ್ತದೆ. ಸಿಟಿ ರವಿ ಓದ್ಕೊಂಡು ಬಂದಿಲ್ಲ. ಸಂಘ ಪರಿವಾರದ ಜೊತೆ ಇದ್ದು ಮಾತನಾಡುವುದನ್ನು ಕಲಿತುಕೊಂಡಿದ್ದಾನೆ ಎಂದು ವಾಗ್ದಾಳಿ ನಡೆಸಿದರು.
ಹೈಕಮಾಂಡ್‍ಗೆ ನನ್ನ ಬಗ್ಗೆ ತಪ್ಪು ವರದಿ ಕೊಟ್ಟಿದ್ದಾರೆ. ವೈಯಕ್ತಿಕ ಕಾರಣಕ್ಕೆ ರಾಜಕಾರಣ ಮಾಡುತ್ತಿದ್ದಾರೆ. ಕೆಲ ರಾಜ್ಯ ನಾಯಕರೇ ಇದಕ್ಕೆ ಕಾರಣ. ಸಿಟಿ ರವಿ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಿ ತಿಳಿದಿದೆ. ಹೈಕಮಾಂಡ್ ಮುಂದೆ ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಟಿಕೆಟ್ ತಪ್ಪಿಸಿದ್ದಾರೆ. ಬಿಜೆಪಿ ಮುಗಿಸುವವರೆಗೂ ಸಿ.ಟಿ ರವಿ ವಿಶ್ರಾಂತಿ ಪಡೆಯುವುದಿಲ್ಲ. ಪಕ್ಷಕ್ಕೆ ಇದು ಮುಂದೇ ಗೊತ್ತಾಗುತ್ತದೆ ಎಂದು ಗುಡುಗಿದರು.
ಯಡಿಯೂರಪ್ಪ ಸ್ವಿಚ್ ಆಫ್ ಮಾಡಿದ್ರೆ ಬಿಜೆಪಿಗೆ 50 ಸೀಟ್ ಬರುವುದಿಲ್ಲ. ಟಿಕೆಟ್ ಕೈ ತಪ್ಪಿದ ಬಳಿಕ ಯಾವ ಒಬ್ಬ ನಾಯಕರು ಕರೆ ಮಾಡಿ ಮಾತನಾಡಿಲ್ಲ. ನಾನೇ ಸಿಎಂ ಭೇಟಿ ಮಾಡಿದ್ದೆ, ಸಿಎಂ ಅವರು ಮಾತನಾಡಿದ ದಾಟಿಯಿಂದಾಗಿ ನನಗೆ ಟಿಕೆಟ್ ಇಲ್ಲ ಎನ್ನುವುದು ಖಚಿತವಾಗಿತ್ತು ಎಂದು ಕಿಡಿಕಾರಿದ ಅವರು, ಶಾಸಕ ಭವನದಿಂದ ಹೊರಟರು. ಈ ವೇಳೆ ಶಾಸಕನಾಗಿಯೇ ಮರಳಿ ಬರೋದಾಗಿ ಶಪಥ ಮಾಡಿದರು.
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…
ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…