ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರನ್ನು ಸೋಲಿಸಲು ಟಾರ್ಗೆಟ್ ಫಿಕ್ಸ್ ಆಗಿದೆ. ಇಬ್ಬರನ್ನು ಸೋಲಿಸಲು, ಲಿಂಗಾಯತ ವೋಟ್ ಬ್ಯಾಂಕ್ಳಿ ಉಸಿಕೊಳ್ಳಲು ಬಿಜೆಪಿ ನಾಯಕರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ.
ಅವಿಭಜಿತ ಧಾರವಾಡ ಜಿಲ್ಲೆಯ 175 ನಾಯಕರ ಜೊತೆ ಅಮಿತ್ ಶಾ ಮಂಥನ ನಡೆಸಿದ್ದಾರೆ. ಇವತ್ತು ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಧಾವಿಸಿ, ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
ಮೂಲಗಳ ಪ್ರಕಾರ, ಶೆಟ್ಟರ್, ಸವದಿ ಸೋಲಿಸಲು ಬಿಎಸ್‌ವೈ ಮತ್ತು ಬೊಮ್ಮಾಯಿಗೆ ಹೈಕಮಾಂಡ್ ಟಾಸ್ಕ್ ನೀಡಿದೆ. ಬುಧವಾರ ಅಥಣಿ, ಹುಬ್ಬಳ್ಳಿ ಧಾರವಾಡದಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ.
ಈ ಮಧ್ಯೆ ಶೆಟ್ಟರ್ ವಿರುದ್ಧವೂ ವಾಗ್ದಾಳಿ ನಡೆಸಿದ ಅಮಿತ್ ಶಾ, ಹುಬ್ಬಳ್ಳಿಯಲ್ಲಿ ಶೆಟ್ಟರ್ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಸೋಲಬೇಕು ಎಂದು ಕರೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel