ಶೆಟ್ಟರ್‌, ಸವದಿ ಸೋಲಿಸಲು ಬೊಮ್ಮಾಯಿ, ಬಿಎಸ್‌ವೈಗೆ ಟಾಸ್ಕ್‌

April 26, 2023
10:34 AM

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್  ಹಾಗೂ ಲಕ್ಷ್ಮಣ ಸವದಿ ಅವರನ್ನು ಸೋಲಿಸಲು ಟಾರ್ಗೆಟ್ ಫಿಕ್ಸ್ ಆಗಿದೆ. ಇಬ್ಬರನ್ನು ಸೋಲಿಸಲು, ಲಿಂಗಾಯತ ವೋಟ್ ಬ್ಯಾಂಕ್ಳಿ ಉಸಿಕೊಳ್ಳಲು ಬಿಜೆಪಿ ನಾಯಕರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ.

ಅವಿಭಜಿತ ಧಾರವಾಡ ಜಿಲ್ಲೆಯ 175 ನಾಯಕರ ಜೊತೆ ಅಮಿತ್ ಶಾ ಮಂಥನ ನಡೆಸಿದ್ದಾರೆ. ಇವತ್ತು ಬಿಎಸ್‌ ಯಡಿಯೂರಪ್ಪ  ನಿವಾಸಕ್ಕೆ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಧಾವಿಸಿ, ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ಮೂಲಗಳ ಪ್ರಕಾರ, ಶೆಟ್ಟರ್, ಸವದಿ ಸೋಲಿಸಲು ಬಿಎಸ್‌ವೈ ಮತ್ತು ಬೊಮ್ಮಾಯಿಗೆ ಹೈಕಮಾಂಡ್ ಟಾಸ್ಕ್ ನೀಡಿದೆ. ಬುಧವಾರ ಅಥಣಿ, ಹುಬ್ಬಳ್ಳಿ ಧಾರವಾಡದಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ.

ಈ ಮಧ್ಯೆ ಶೆಟ್ಟರ್ ವಿರುದ್ಧವೂ ವಾಗ್ದಾಳಿ ನಡೆಸಿದ ಅಮಿತ್ ಶಾ, ಹುಬ್ಬಳ್ಳಿಯಲ್ಲಿ ಶೆಟ್ಟರ್ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಸೋಲಬೇಕು ಎಂದು ಕರೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror