ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬಿಜೆಪಿ ಭ್ರಷ್ಟ ನಾಯಕರು ಜೈಲಿಗೆ : ಬಿಕೆ ಹರಿಪ್ರಸಾದ್

April 25, 2023
9:04 AM

ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಬಿಜೆಪಿಯ ಭ್ರಷ್ಟ ನಾಯಕರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

Advertisement
Advertisement

ಕಾರವಾರದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಪಾಳುಬಿದ್ದ ಸ್ಮಶಾನ, ಮುರುಕಲು ಬಿದ್ದ ಮಸೀದಿ, ದೇವಸ್ಥಾನದಲ್ಲಿ ರಾಜಕೀಯ ಮಾಡುವವರು. ಜಾತಿ, ಧರ್ಮ ಹಾಗೂ ದ್ವೇಷದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಜನ ಸರಿಯಾದ ಉತ್ತರ ಕೊಡುತ್ತಾರೆ ಎಂದರು.

Advertisement

ಬಿಜೆಪಿಯಲ್ಲಿ ಜಾತಿ ಮತ್ತು ಧರ್ಮ ರಂಗಪ್ರವೇಶ ಮಾಡಿದೆ. ಮಾಡಾಳ್ ವಿರೂಪಾಕ್ಷ ಭ್ರಷ್ಟಾಚಾರದಲ್ಲಿ ಬಿಜೆಪಿ ಮಾಡೆಲ್ ಆಗಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಎರಡೂವರೆ ಸಾವಿರ ಕೋಟಿ ಕೊಡುವವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಯತ್ನಾಳ್ ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ದಿವಾಳಿತನದ ಭಯವಿದೆ. ಕಾಂಗ್ರೆಸ್‌ನ  ಪ್ರಮುಖ ನಾಯಕರ ಪೋನ್ ಕದ್ದಾಲಿಕೆ ಈಗಲೂ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಬಿಜೆಪಿಯವರು ಎಲ್ಲಾ ತನಿಖಾ ಸಂಸ್ಥೆಯನ್ನು ಖರೀದಿ ಮಾಡಿದ್ದಾರೆ. ಸಿಬಿಐ (CBI), ಇಡಿಗಳನ್ನು (ED) ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಹೀಗಾಗಿ ನಾವು ದೂರು ಕೊಡಲು ಹೋಗಿಲ್ಲ. ಭಾನುವಾರ ಗಂಗಾಧರ ಗೌಡರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದೆವು. ಸೋಮವಾರ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ನಾವು ಬ್ರಿಟೀಷರ ಗುಲಾಮರಾಗಿರಲಿಲ್ಲ. ಬೂಟ್ ನೆಕ್ಕಿದವರಲ್ಲ. ಬ್ರಿಟೀಷರಿಗೆ ಎದೆ ತಟ್ಟಿ ನಿಂತವರು ನಾವು. ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror