ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಬಿಜೆಪಿಯ ಭ್ರಷ್ಟ ನಾಯಕರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ಕಾರವಾರದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಪಾಳುಬಿದ್ದ ಸ್ಮಶಾನ, ಮುರುಕಲು ಬಿದ್ದ ಮಸೀದಿ, ದೇವಸ್ಥಾನದಲ್ಲಿ ರಾಜಕೀಯ ಮಾಡುವವರು. ಜಾತಿ, ಧರ್ಮ ಹಾಗೂ ದ್ವೇಷದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಜನ ಸರಿಯಾದ ಉತ್ತರ ಕೊಡುತ್ತಾರೆ ಎಂದರು.
ಬಿಜೆಪಿಯಲ್ಲಿ ಜಾತಿ ಮತ್ತು ಧರ್ಮ ರಂಗಪ್ರವೇಶ ಮಾಡಿದೆ. ಮಾಡಾಳ್ ವಿರೂಪಾಕ್ಷ ಭ್ರಷ್ಟಾಚಾರದಲ್ಲಿ ಬಿಜೆಪಿ ಮಾಡೆಲ್ ಆಗಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಎರಡೂವರೆ ಸಾವಿರ ಕೋಟಿ ಕೊಡುವವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಯತ್ನಾಳ್ ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ದಿವಾಳಿತನದ ಭಯವಿದೆ. ಕಾಂಗ್ರೆಸ್‌ನ ಪ್ರಮುಖ ನಾಯಕರ ಪೋನ್ ಕದ್ದಾಲಿಕೆ ಈಗಲೂ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಬಿಜೆಪಿಯವರು ಎಲ್ಲಾ ತನಿಖಾ ಸಂಸ್ಥೆಯನ್ನು ಖರೀದಿ ಮಾಡಿದ್ದಾರೆ. ಸಿಬಿಐ (CBI), ಇಡಿಗಳನ್ನು (ED) ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಹೀಗಾಗಿ ನಾವು ದೂರು ಕೊಡಲು ಹೋಗಿಲ್ಲ. ಭಾನುವಾರ ಗಂಗಾಧರ ಗೌಡರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದೆವು. ಸೋಮವಾರ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ನಾವು ಬ್ರಿಟೀಷರ ಗುಲಾಮರಾಗಿರಲಿಲ್ಲ. ಬೂಟ್ ನೆಕ್ಕಿದವರಲ್ಲ. ಬ್ರಿಟೀಷರಿಗೆ ಎದೆ ತಟ್ಟಿ ನಿಂತವರು ನಾವು. ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…
ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಂಭವನೀಯ ದಾಳಿಯ ಬಗ್ಗೆ…
ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…