ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.
ಮೈಸೂರಿನಲ್ಲಿ ಚುನಾವಣಾ ಅಖಾಡ ರಂಗೇರಿದೆ. ಮೈಸೂರು ಚುನಾವಣಾ ಅಖಾಡಕ್ಕೆ ಬಿ.ಎಲ್ ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಮಾಧ್ಯಮಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿ, ಮಾರ್ಮಿಕವಾಗಿ ಒಂದು ಮಾತು ಹೇಳಿ ಸುಮ್ಮನಾದರು.
ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ ಅವರೆ ಮಾತಾಡಲಿ. ನಾನು ಮಾತಾಡಿ ಯಾರಿಗೆ ಯಾಕೆ ಪ್ರತಿಸ್ಪರ್ಧಿಯಾಗಲಿ ಎಂದು ವ್ಯಂಗ್ಯವಾಡಿದರು.
ಈ ಹಿಂದೆ ಜಗದೀಶ್ ಶೆಟ್ಟರ್ ಮಾತನಾಡಿ, ತಮಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣ ಎಂದು ನೇರ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೇ ಈವರೆಗೂ ಅನೇಕ ನಾಯಕರಿಗೆ ಬಿ.ಎಲ್ ಸಂತೋಷ್ ಬಿಜೆಪಿಯಲ್ಲಿ ಟಿಕೆಟ್ ತಪ್ಪಿಸಿ, ತಮಗೆ ಬೇಕಾದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದರು.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…