ಬಿಜೆಪಿಯ ಸ್ಟಾರ್ ಪ್ರಚಾರಕ ಅಣ್ಣಾಮಲೈ ವಿರುದ್ಧ ಕರ್ನಾಟಕ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ದೂರು ನೀಡಿದ ಬಳಿಕ ಮಾತನಾಡಿದ ಕೆಪಿಸಿಸಿ (KPCC) ವಕ್ತಾರ ನಟರಾಜ್ ಗೌಡ, ತಮ್ಮ ವರ್ಚಸ್ಸು ಬಳಸಿಕೊಂಡು ಹಣ ಸಾಗಾಣಿಕೆ ಮಾಡಬಹುದು ಚುನಾವಣಾ ಅಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ನಮ್ಮ ಕಾಂಗ್ರೆಸ್ ನಾಯಕರು ನಮಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ನಾವು ದೂರು ನೀಡಿದ್ದೇವೆ ಎಂದು ತಿಳಿಸಿದರು.
ದೂರಿನಲ್ಲಿ ಏನಿದೆ?
ಮಾಜಿ ಐಪಿಎಸ್ ಆಗಿರುವ ಅಣ್ಣಾಮಲೈ ಈ ಹಿಂದೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಹಲವು ಪೊಲೀಸರ ಪರಿಚಯವಿದೆ. ಚುನಾವಣೆ ಸಮಯದಲ್ಲಿ ಬಹಳ ಮುಖ್ಯವಾದ ಹುದ್ದೆಯಲ್ಲಿ ಅಣ್ಣಾಮಲೈ ಅವರ ಪರಿಚಯಸ್ಥ ಬ್ಯಾಚ್‌ಮೇಟ್‌ಗಳು ಕರ್ತವ್ಯ ಮಾಡುತ್ತಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel