ಬಜರಂಗದಳ ನಿಷೇಧಕ್ಕೆ ಧೈರ್ಯ ಮಾಡುವವರಿಗೆ ಬಜರಂಗದಳದ ಶಕ್ತಿ ತೋರಿಸಲೇಬೇಕು ಎಂದು ಕಾಂಗ್ರೆಸ್ ವಿರುದ್ಧ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹರಿಹಾಯ್ದರು. ಟಿಳಕಚೌಕನಲ್ಲಿ ಉತ್ತರ ಕ್ಷೇತ್ರದಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಬಗ್ಗೆ ಪ್ರಸ್ತಾಪ ಮಾಡಿದೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಹೇರುತ್ತೇವೆ ಎಂದು ಹೇಳಿದೆ. ಆದರೆ ಬಜರಂಗದಳ ನಿಷೇಧಿಸಲು ನಿಮ್ಮಪ್ಪನ ಬಳಿ ತಾಕತ್ ಇದೆಯಾ? ಯಾವನ ಅಪ್ಪನಿಗಾದರೂ ಧೈರ್ಯ ಇದೆಯಾ? ಬಜರಂಗದಳ ನಿಷೇಧಿಸಲು ನಿಮ್ಮ ಬಳಿ ಧೈರ್ಯ, ತಾಕತ್ ಇಲ್ಲ? ಬಜರಂಗದಳ ನಿಷೇಧ ಮಾಡ್ತೀವಿ ಅಂದ್ರೆ ಇದರ ಅರ್ಥ ಏನು ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷದ ನಿಯತ್ತು ಹೇಗಿದೆ ಗೊತ್ತಾ?. ರಾಮಸೇತು ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಂದಾಗ ರಾಮ ಕಾಲ್ಪನಿಕ ಎಂದು ಅಫಿಡೆವಿಟ್ ಸಲ್ಲಿಸಿದರು. ರಾಮನ ಅಸ್ತಿತ್ವ ಪ್ರಶ್ನಿಸುವ ಪಕ್ಷ ಒಂದೆಡೆ, ರಾಮಮಂದಿರ ಸ್ಥಾಪನೆ ಮಾಡುತ್ತಿರುವ ಪಕ್ಷ ಒಂದೆಡೆಯಾಗಿದೆ. ಬಜರಂಗಳ ಬ್ಯಾನ್ ಮಾಡಲು ತಾಕತ್ತಿದ್ದೇಯೇ ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಬಜರಂಗದಳ ನಿಷೇಧ ಮಾಡಲು ಆಗಲ್ಲ. ಅಂದು ರಾಮನನ್ನು ವಿರೋಧಿಸಿದವರು ಇಂದು ಹನುಮನನ್ನು ವಿರೋಧಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣ, ಬಜರಂಗಿ ನಮ್ಮ ಹಿಂದೂ ಸಂಸ್ಕೃತಿಯ ಅಸ್ಮಿತೆಯಾಗಿದೆ. ರಾಮನ ಅಸ್ತಿತ್ವ ಬಗ್ಗೆ ಮಾತನಾಡುವವರಿಗೆ ಮತದಾನ ವೇಳೆ ತಕ್ಕಪಾಠ ಕಲಿಸಬೇಕು ಎಂದು ವಾಗ್ದಾಳಿ ನಡೆಸಿದರು.
ಸಭೆಯಲ್ಲಿ ಸಂಸದೆ ಮಂಗಲ ಅಂಗಡಿ, ಶಾಸಕ ಅನಿಲ್ ಬೆನಕೆ, ಶಂಕರಗೌಡ ಪಾಟೀಲ,ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ್ ಭಾಗಿಯಾಗಿದ್ದರು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…