ಬಿಜೆಪಿಯವರ ರೇಟ್ ಕಾರ್ಡ್ ಅನ್ನು ನಾವು ಕೊಟ್ಟಿಲ್ಲ. ಬಿಜೆಪಿಯವರೇ ಕೊಟ್ಟಿದ್ದನ್ನು ನಾವು ಹಾಕಿದ್ದೇವೆ ಅಷ್ಟೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿ ವಿರುದ್ಧ ಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು ನೀಡಿದ್ದಕ್ಕೆ ಚುನಾವಣಾ ಆಯೋಗ ನೀಡಿದ ನೋಟಿಸ್‌ಗೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್, ಗೂಳಿಹಟ್ಟಿ ಶೇಖರ್, ಹೆಚ್ ವಿಶ್ವನಾಥ್, ಮಾಧ್ಯಮದವರು ಕೊಟ್ಟಿದ್ದಾರೆ. ಅದನ್ನು ನಾವು ಪ್ರಕಟಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರೇಟ್ ಎಷ್ಟು, ಮಂತ್ರಿ ಸ್ಥಾನಕ್ಕೆ ಎಷ್ಟು, ಮಠಗಳ ಸ್ವಾಮೀಜಿಗಳಿಂದ ಎಷ್ಟು ಅಂತ ಬಿಜೆಪಿ ನಾಯಕರೇ ಹೇಳಿದ್ದನ್ನು ನಾವು ಪ್ರಕಟ ಮಾಡಿದ್ದೇವೆ ಎಂದು ತಿಳಿಸಿದರು.
ಶನಿವಾರ ಕಾಂಗ್ರೆಸ್ ಬಿಜೆಪಿ ಭ್ರಷ್ಟಾಚಾರದ ರೇಟ್ ಕಾರ್ಡ್ ಬಳಸಿ ಜಾಹೀರಾತು ನೀಡಿತ್ತು. ಈ ಜಾಹೀರಾತನ್ನು ಪ್ರಶ್ನಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…