ಮುಗಿಯಿತು ಮತ ಸಮರ, ಶುರುವಾಯ್ತು ಲೆಕ್ಕಾಚಾರ | ಮತಗಟ್ಟೆ ಸಮೀಕ್ಷೆಗಳಲ್ಲಿ `ಕೈ’ ಮುನ್ನಡೆ |

May 11, 2023
10:34 AM

ಮಹತ್ವದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಕಾರ್ಯ ಮುಕ್ತಾಯಗೊಂಡಿದ್ದು, ಇದೀಗ ರಾಜಕೀಯ ಪಕ್ಷಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಶುರುವಾಗಿದೆ.

2018ರ ಚುನಾವಣೆಯಲ್ಲಿ 72.10% ಮತದಾನ ನಡೆದಿದ್ದರೆ ಈ ಬಾರಿ 72.81% ಮತದಾನ ನಡೆದಿದೆ. ಬಹುಮತಕ್ಕೆ 113 ಸ್ಥಾನಗಳ ಅಗತ್ಯವಿದ್ದು ಕಾಂಗ್ರೆಸ್, ಬಿಜೆಪಿ ಮಧ್ಯೆ ಜಿದ್ದಾಜಿದ್ದಿ ನಡೆಯುತ್ತಿದೆ. ಎಕ್ಸಿಟ್ ಪೋಲ್‌ನ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಕ್ಕರೆ, ಕೆಲವು ಸಮೀಕ್ಷೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನೂ ಕೆಲವು ಸಮೀಕ್ಷೆಗಳಲ್ಲಿ ಅಂತ್ರವಾಗಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಬರಬಹುದು ಎಂದು ಹೇಳಲಾಗುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ನಿಖರ ಫಲಿತಾಂಶ ನೀಡಿದ್ದ ಟುಡೇಸ್ ಚಾಣಕ್ಯ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ.  ಕಾಂಗ್ರೆಸ್‌ನಲ್ಲಿ ನಾಯಕರೂ ಸಹ ಲೆಕ್ಕಾಚಾರ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ ಲೆಕ್ಕದಲ್ಲಿ ಕಾಂಗ್ರೆಸ್ 130+, ಬಿಜೆಪಿ 65+, ಜೆಡಿಎಸ್ 22+, ಇತರೆ 3 ಸ್ಥಾನ ಬಂದರೆ, ಡಿಕೆಶಿ ಲೆಕ್ಕಚಾರದಲ್ಲಿ ಕಾಂಗ್ರೆಸ್ 141+, ಬಿಜೆಪಿ 60+, ಜೆಡಿಎಸ್ 20+, ಇತರೆ 2+ ಸ್ಥಾನಗಳು ಬರಲಿವೆ. ಆರ್‌ ಎಸ್‌ ಎಸ್‌ ಆಂತರಿಕ ಸಮೀಕ್ಷೆ ಪ್ರಕಾರವೂ ಬಿಜೆಪಿಗೆ ಹಿನ್ನಡೆ ಇದೆ. ಈ ಪ್ರಕಾರ ಬಿಜೆಪಿಯು 100 ಸ್ಥಾನ ದಾಟುವುದಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror