ಮಹತ್ವದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಕಾರ್ಯ ಮುಕ್ತಾಯಗೊಂಡಿದ್ದು, ಇದೀಗ ರಾಜಕೀಯ ಪಕ್ಷಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಶುರುವಾಗಿದೆ.
2018ರ ಚುನಾವಣೆಯಲ್ಲಿ 72.10% ಮತದಾನ ನಡೆದಿದ್ದರೆ ಈ ಬಾರಿ 72.81% ಮತದಾನ ನಡೆದಿದೆ. ಬಹುಮತಕ್ಕೆ 113 ಸ್ಥಾನಗಳ ಅಗತ್ಯವಿದ್ದು ಕಾಂಗ್ರೆಸ್, ಬಿಜೆಪಿ ಮಧ್ಯೆ ಜಿದ್ದಾಜಿದ್ದಿ ನಡೆಯುತ್ತಿದೆ. ಎಕ್ಸಿಟ್ ಪೋಲ್‌ನ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಕ್ಕರೆ, ಕೆಲವು ಸಮೀಕ್ಷೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನೂ ಕೆಲವು ಸಮೀಕ್ಷೆಗಳಲ್ಲಿ ಅಂತ್ರವಾಗಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಬರಬಹುದು ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ನಿಖರ ಫಲಿತಾಂಶ ನೀಡಿದ್ದ ಟುಡೇಸ್ ಚಾಣಕ್ಯ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಕಾಂಗ್ರೆಸ್‌ನಲ್ಲಿ ನಾಯಕರೂ ಸಹ ಲೆಕ್ಕಾಚಾರ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ ಲೆಕ್ಕದಲ್ಲಿ ಕಾಂಗ್ರೆಸ್ 130+, ಬಿಜೆಪಿ 65+, ಜೆಡಿಎಸ್ 22+, ಇತರೆ 3 ಸ್ಥಾನ ಬಂದರೆ, ಡಿಕೆಶಿ ಲೆಕ್ಕಚಾರದಲ್ಲಿ ಕಾಂಗ್ರೆಸ್ 141+, ಬಿಜೆಪಿ 60+, ಜೆಡಿಎಸ್ 20+, ಇತರೆ 2+ ಸ್ಥಾನಗಳು ಬರಲಿವೆ. ಆರ್ ಎಸ್ ಎಸ್ ಆಂತರಿಕ ಸಮೀಕ್ಷೆ ಪ್ರಕಾರವೂ ಬಿಜೆಪಿಗೆ ಹಿನ್ನಡೆ ಇದೆ. ಈ ಪ್ರಕಾರ ಬಿಜೆಪಿಯು 100 ಸ್ಥಾನ ದಾಟುವುದಿಲ್ಲ.
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…