ಪ್ರಧಾನಿಯಾಗಿರುವವರು ಪಂಚಾಯ್ತಿ ಚುನಾವಣೆಗಳಲ್ಲಿ ತಿರುಗುವ ಹಾಗೆ ತಿರುಗ್ತಿದ್ದಾರೆ | ರಮೇಶ್ ಕುಮಾರ್

May 6, 2023
9:19 AM

ಪ್ರಧಾನಿಯಾಗಿರುವವರು ಪಂಚಾಯ್ತಿ ಚುನಾವಣೆಗಳಲ್ಲಿ ತಿರುಗುವ ಹಾಗೆ ತಿರುಗ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ರಾಯಲಪಾಡುನಲ್ಲಿ ಮಾತನಾಡುತ್ತಾ ರಾಜ್ಯದಲ್ಲಿ ಪ್ರದಾನಿ ನರೇಂದ್ರ ಮೋದಿ ಪ್ರವಾಸ ಕುರಿತು ಪ್ರತಿಕ್ರಿಯಿಸಿ, ಮದನಪಲ್ಲಿಯಲ್ಲಿ ಬೀಡಿ ಮಾರಾಟ ಮಾಡಲು ತಿರುಗುವ ಹಾಗೆ ಇವರು ತಿರುಗುತ್ತಿದ್ದಾರೆ. ಲಾಲ್ ಬಹಾದ್ದೂರ್ ಶಾಸ್ತ್ರಿ, ಇಂದಿರಾಗಾಂಧಿಯಂತಹವರೆಲ್ಲ ಪ್ರಧಾನಿ ಆಗಿದ್ದರು, ಈ ರೀತಿ ಆಡಲಿಲ್ಲ. ನಿಮ್ಮ ಸಚಿವರು ಲಂಚ ತೆಗೆದುಕೊಂಡಿದ್ದಾರೆ ಎಂದು ಗುತ್ತಿಗೆದಾರರು ಬರೆದ ಪತ್ರಕ್ಕೆ ಈ ದಿನದವರೆಗೂ ಉತ್ತರ ನೀಡಲಿಲ್ಲ ಎಂದು ಕಿಡಿಕಾರಿದರು.

 

7 ಕೆ.ಜಿ ಕೊಡುತ್ತಿದ್ದ ಅಕ್ಕಿಯನ್ನು 4 ಕೆ.ಜಿಗೆ ಇಳಿಸಿದರು. ಕಾಂಗ್ರೆಸ್‍ನ ಗುರುತಿನಿಂದ ಗೆದ್ದ ಶಾಸಕರನ್ನು ಕೋಟ್ಯಂತರ ಹಣ ಕೊಟ್ಟು ಖರೀದಿಸಿದರು. ಹೀಗೆ ಸರ್ಕಾರ ರಚಿಸಿ ಈ ರೀತಿಯಾಗಿ ಸರ್ಕಾರ ನಡೆಸುತ್ತಿದ್ದಾರೆ. ಕರ್ನಾಟಕದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ಸರ್ವನಾಶ ಮಾಡಿದೆ. ಈ ಸರ್ಕಾರಕ್ಕೆ ಮಾನವೀಯತೆ ಇಲ್ಲ, ಅರ್ಥವೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror