ಮೋದಿ, ಅಮಿತ್ ಶಾ ಬಂದರೂ ಕನ್ನಡಿಗರು ಬಿಜೆಪಿಗೆ ಮಣೆ ಹಾಕಲ್ಲ | ನಿಖಿಲ್ ಕುಮಾರಸ್ವಾಮಿ

April 23, 2023
9:44 AM

ಈ ಬಾರಿ ರಾಜ್ಯಕ್ಕೆ ಮೋದಿ, ಅಮಿತ್ ಶಾ ಬಂದರೂ ಕನ್ನಡಿಗರು ಬಿಜೆಪಿಗೆ ಮಣೆ ಹಾಕುವುದಿಲ್ಲ. ಕರ್ನಾಟಕದಲ್ಲಿ  ಬಿಜೆಪಿಗೆ ಕನ್ನಡಿಗರು ಬಹಿಷ್ಕಾರ ಹಾಕುತ್ತಾರೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು.

ರಾಜ್ಯದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾಥ್ ಅವರಿಂದ ಸರಣಿ ರ‍್ಯಾಲಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತ ಸಂಪೂರ್ಣವಾಗಿ ನೆಲ ಕಚ್ಚಿದೆ. ರಾಜ್ಯ ಸರ್ಕಾರ ಕೇವಲ ಹಗರಣದಲ್ಲಿ ಮುಳುಗಿದೆ. 123 ಸ್ಥಾನವನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂಬ ಸಾಮರ್ಥ್ಯವನ್ನು ಬಿಜೆಪಿ ನಾಯಕರು ಕಳೆದುಕೊಂಡಿದ್ದಾರೆ. ಹೀಗಾಗಿ ಕೇಂದ್ರ ಬಿಜೆಪಿ ನಾಯಕರೇ ಪ್ರಚಾರಕ್ಕೆ ಬರುವ ಅನಿವಾರ್ಯ ಪರಿಸ್ಥಿತಿ ಸೃಷ್ಟಿಯಾಗಿದೆ. 2018-19ರಲ್ಲಿ ಮೋದಿ ಹೆಸರಿನಲ್ಲಿ ಜನರು ಮತ ನೀಡಿದ್ದರು. ಆದರೆ ಈ ಬಾರಿ ನೀಡುವುದಿಲ್ಲ. ಅದರ ಬದಲು ಬಿಜೆಪಿ ಸರ್ಕಾರವನ್ನು ಬಹಿಷ್ಕರಿಸುತ್ತಾರೆ ಎಂದು ಟೀಕಿಸಿದರು.

ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಬಿರುಸಿನ ಪ್ರಚಾರ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು, ಮುಖಂಡರು ಅತ್ಯಂತ ಉತ್ಸಾಹದಿಂದ ಯುವಕರ ಜೊತೆ ಕೈಜೋಡಿಸಿ ಶಕ್ತಿಮೀರಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಕಳೆದ 29 ವರ್ಷಗಳಿಂದ ನಿರಂತರವಾಗಿ ಕ್ಷೇತ್ರ ಹಾಗೂ ಇಡೀ ಜಿಲ್ಲೆಗೆ ಅತ್ಯಂತ ಪ್ರಾಮಾಣಿಕವಾಗಿ ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ದುಡಿದಿದ್ದಾರೆ. ಈ ದುಡಿಮೆಯನ್ನು ಗುರುತಿಸುವಂತಹ ಕೆಲಸ ಕ್ಷೇತ್ರದ ಜನರು ಮಾಡುತ್ತಾರೆ. ಒಬ್ಬ ಯುವಕನಿಗೆ ಅವಕಾಶವನ್ನು ಮಾಡಿಕೊಡುತ್ತಾರೆ ಎಂದು ನಂಬಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror