ಈ ಬಾರಿ ರಾಜ್ಯಕ್ಕೆ ಮೋದಿ, ಅಮಿತ್ ಶಾ ಬಂದರೂ ಕನ್ನಡಿಗರು ಬಿಜೆಪಿಗೆ ಮಣೆ ಹಾಕುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿಗೆ ಕನ್ನಡಿಗರು ಬಹಿಷ್ಕಾರ ಹಾಕುತ್ತಾರೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು.
ರಾಜ್ಯದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾಥ್ ಅವರಿಂದ ಸರಣಿ ರ‍್ಯಾಲಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತ ಸಂಪೂರ್ಣವಾಗಿ ನೆಲ ಕಚ್ಚಿದೆ. ರಾಜ್ಯ ಸರ್ಕಾರ ಕೇವಲ ಹಗರಣದಲ್ಲಿ ಮುಳುಗಿದೆ. 123 ಸ್ಥಾನವನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂಬ ಸಾಮರ್ಥ್ಯವನ್ನು ಬಿಜೆಪಿ ನಾಯಕರು ಕಳೆದುಕೊಂಡಿದ್ದಾರೆ. ಹೀಗಾಗಿ ಕೇಂದ್ರ ಬಿಜೆಪಿ ನಾಯಕರೇ ಪ್ರಚಾರಕ್ಕೆ ಬರುವ ಅನಿವಾರ್ಯ ಪರಿಸ್ಥಿತಿ ಸೃಷ್ಟಿಯಾಗಿದೆ. 2018-19ರಲ್ಲಿ ಮೋದಿ ಹೆಸರಿನಲ್ಲಿ ಜನರು ಮತ ನೀಡಿದ್ದರು. ಆದರೆ ಈ ಬಾರಿ ನೀಡುವುದಿಲ್ಲ. ಅದರ ಬದಲು ಬಿಜೆಪಿ ಸರ್ಕಾರವನ್ನು ಬಹಿಷ್ಕರಿಸುತ್ತಾರೆ ಎಂದು ಟೀಕಿಸಿದರು.
ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಬಿರುಸಿನ ಪ್ರಚಾರ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು, ಮುಖಂಡರು ಅತ್ಯಂತ ಉತ್ಸಾಹದಿಂದ ಯುವಕರ ಜೊತೆ ಕೈಜೋಡಿಸಿ ಶಕ್ತಿಮೀರಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಕಳೆದ 29 ವರ್ಷಗಳಿಂದ ನಿರಂತರವಾಗಿ ಕ್ಷೇತ್ರ ಹಾಗೂ ಇಡೀ ಜಿಲ್ಲೆಗೆ ಅತ್ಯಂತ ಪ್ರಾಮಾಣಿಕವಾಗಿ ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ದುಡಿದಿದ್ದಾರೆ. ಈ ದುಡಿಮೆಯನ್ನು ಗುರುತಿಸುವಂತಹ ಕೆಲಸ ಕ್ಷೇತ್ರದ ಜನರು ಮಾಡುತ್ತಾರೆ. ಒಬ್ಬ ಯುವಕನಿಗೆ ಅವಕಾಶವನ್ನು ಮಾಡಿಕೊಡುತ್ತಾರೆ ಎಂದು ನಂಬಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ…