Advertisement
ಸುದ್ದಿಗಳು

ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್

Share

ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ  ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

Advertisement
Advertisement
Advertisement

ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ.

Advertisement

ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?:
ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ.

Advertisement

ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‍ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪಿಸುತ್ತೇವೆ.

ಪೋಷಣೆ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಶ್ರೀ ಅನ್ನ- ಸಿರಿ ಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.

Advertisement

ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.

ರಾಜ್ಯದಾದ್ಯಂತ ನಿವೇಶನ ರಹಿತ, ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.

Advertisement

ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆಯಡಿ ಎಸ್‍ಸಿ, ಎಸ್‍ಟಿ ಸಮುದಾಯದ ಮಹಿಳೆಯರು 5 ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡುತ್ತೇವೆ.

ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.

Advertisement

ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.

ಸಮನ್ವಯ ಯೋಜನೆ ಇದರಡಿ ತ್ವರಿತಗತಿಯಲ್ಲಿ SME ಗಳು ಮತ್ತು ITI ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.

Advertisement

ಐಎಎಸ್, ಕೆಎಎಸ್, ಬ್ಯಾಂಕಿಂಗ್, ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾ೦ಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.

ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‍ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.

Advertisement

ನಮ್ಮ ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ರಾಜ್ಯ ರಾಜಧಾನಿ ಪ್ರದೇಶ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‍ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.

ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾಜಿರ್ಂಗ್ ಸ್ಟೇಷನ್‍ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‍ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್‍ಗಳನ್ನು ಎಲೆಕ್ಟ್ರಿಕ್ ಬಸ್‍ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ಇಬಿ ಸಿಟಿ ಅಭಿವೃದ್ಧಿಗೊಳಿಸುವುದು.

Advertisement

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 30,000 ಕೋಟಿ ಮೊತ್ತದ ಕೆ-ಅಗ್ರಿ ಫಂಡ್ ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‍ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್‍ಗಳನ್ನು ಸ್ಥಾಪಿಸುತ್ತೇವೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಅರವಿಂದ್ ಲಿಂಬಾವಳಿ, ಶೋಭಾರಂದ್ಲಾಜೆ, ಧಮೇರ್‍ಂದ್ರ ಪ್ರಧಾನ್ ಇತರರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ…

15 hours ago

ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…

15 hours ago

ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…

1 day ago

ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ

ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…

1 day ago

ಅಡಿಕೆ ಬೆಳೆಗಾರರಿಗೆ ಆತಂಕ ಬೇಡ | ಅಡಿಕೆ ಬೆಳೆಗಾರರ ಸಮಸ್ಯೆ ಬಗಹೆರಿಸಲು ಸಿದ್ದ | ಕೇಂದ್ರ ಸಚಿವ ಶಿವರಾಜ್ ಸಿಂಗ್  ಚಾವ್ಙಾಣ್ ಭರವಸೆ |

ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…

1 day ago

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ

ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…

4 days ago