ಮೈಸೂರಿನಲ್ಲಿ ಮೋದಿ ಮೇನಿಯಾ – 4 ಕಿ.ಮೀ. ಭರ್ಜರಿ ರೋಡ್‍ ಶೋ : ತುಂಬಿದ ಜನಸಾಗರ

April 30, 2023
10:20 PM

ಕರ್ನಾಟಕದಲ್ಲಿ ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಅಂತ ಪ್ರಧಾನಿ ಮೋದಿ ಪಟ್ಟ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ  ಸುಮಾರು 4 ಕಿ.ಮೀವರೆಗೆ ಮೋದಿ ರೋಡ್ ಶೋ ನಡೆಸಿದರು.

Advertisement
Advertisement

ಮತದಾನಕ್ಕೆ ಇನ್ನು 10 ದಿನ ಬಾಕಿ ಇದ್ದು ರೋಡ್‍ಶೋ, ರ‍್ಯಾಲಿಗಳನ್ನು ತೀವ್ರಗೊಳಿಸಿದ್ದಾರೆ. 2ನೇ ದಿನವಾದ ಇವತ್ತು ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರಿನಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಮಾವೇಶದ ಬಳಿಕ ಮೈಸೂರಿನ ಓವೆಲ್ ಮೈದಾನದಲ್ಲಿ ಇಳಿದ ಮೋದಿ ಬಳಿಕ ರೋಡ್ ಶೋ ನಡೆಸಿದರು.

ನಿನ್ನೆ ಬೆಂಗಳೂರಿನಲ್ಲಿ ನಡೆಸಿದಂತೆ ಅರಮನೆ ನಗರಿ ಮೈಸೂರಿನಲ್ಲಿ ಇವತ್ತು ಸುಮಾರು 4 ಕಿ.ಮೀ. ರೋಡ್ ಶೋ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ ಅವರು ಕೇಸರಿ ಶಾಲು ಧರಿಸಿ ಗಮನ ಸೆಳೆದರು. ರೋಡ್ ಶೋದ ರಸ್ತೆ ಇಕ್ಕೆಲೆಗಳಲ್ಲಿ ಕೇಸರಿ ಕಾರ್ಯಕರ್ತರು, ಅಭಿಮಾನಿಗಳು ಮೋದಿ ನೋಡಿ ಪುಳಕಿತರಾದರು. ದಾರಿಯುದ್ಧಕ್ಕೂ ಹೂಮಳೆ ಸುರಿಸಿದರು. ಹೂ ಹಾಕುವಾಗ ಅಭಿಮಾನಿಯೊಬ್ಬನ ಮೊಬೈಲ್ ಅಚಾನಕ್ ತೂರಿ ಬಂದ ಘಟನೆಯೂ ನಡೆಯಿತು. ಮೊಬೈಲ್ ಪ್ರಚಾರ ವಾಹನದ ಮೇಲ್ಗಡೆ ಬಿತ್ತು.

ಗನ್‍ಹೌಸ್ ಸರ್ಕಲ್‍ನಿಂದ ಆರಂಭವಾದ ಪವರ್ ಶೋ, ಕಾಪೋರೇಷನ್ ಸರ್ಕಲ್, ಸಿಟಿ ಬಸ್ ನಿಲ್ದಾಣ, ಕೆ.ಆರ್ ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದ ಸರ್ಕಲ್, ಮಿಲೀನಿಯಂ ಸರ್ಕಲ್‍ನಲ್ಲಿ ಸಾಗಿ ಅಂತ್ಯವಾಯಿತು. ಮೋದಿ ಜೊತೆ ಈಶ್ವರಪ್ಪ, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ರಾಮದಾಸ್ ಇದ್ದರು. ಈ ರೋಡ್ ಶೋ ಮೂಲಕ, ಸಿದ್ದರಾಮಯ್ಯ ಸೇರಿದಂತೆ 3 ಜಿಲ್ಲೆಗಳಿಗೆ ಮೋದಿ ಸಂದೇಶ ರವಾನಿಸಿದರು. ನಾಳೆ ಮೋದಿ ಪ್ರಚಾರಕ್ಕೆ ವಿರಾಮ ಇದ್ದು, ನಾಡಿದ್ದು ಮತ್ತೆ ರಾಜ್ಯಕ್ಕೆ ಬರಲಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror