ಕರ್ನಾಟಕದಲ್ಲಿ ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಅಂತ ಪ್ರಧಾನಿ ಮೋದಿ ಪಟ್ಟ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸುಮಾರು 4 ಕಿ.ಮೀವರೆಗೆ ಮೋದಿ ರೋಡ್ ಶೋ ನಡೆಸಿದರು.
ಮತದಾನಕ್ಕೆ ಇನ್ನು 10 ದಿನ ಬಾಕಿ ಇದ್ದು ರೋಡ್‍ಶೋ, ರ‍್ಯಾಲಿಗಳನ್ನು ತೀವ್ರಗೊಳಿಸಿದ್ದಾರೆ. 2ನೇ ದಿನವಾದ ಇವತ್ತು ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರಿನಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಮಾವೇಶದ ಬಳಿಕ ಮೈಸೂರಿನ ಓವೆಲ್ ಮೈದಾನದಲ್ಲಿ ಇಳಿದ ಮೋದಿ ಬಳಿಕ ರೋಡ್ ಶೋ ನಡೆಸಿದರು.
ನಿನ್ನೆ ಬೆಂಗಳೂರಿನಲ್ಲಿ ನಡೆಸಿದಂತೆ ಅರಮನೆ ನಗರಿ ಮೈಸೂರಿನಲ್ಲಿ ಇವತ್ತು ಸುಮಾರು 4 ಕಿ.ಮೀ. ರೋಡ್ ಶೋ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ ಅವರು ಕೇಸರಿ ಶಾಲು ಧರಿಸಿ ಗಮನ ಸೆಳೆದರು. ರೋಡ್ ಶೋದ ರಸ್ತೆ ಇಕ್ಕೆಲೆಗಳಲ್ಲಿ ಕೇಸರಿ ಕಾರ್ಯಕರ್ತರು, ಅಭಿಮಾನಿಗಳು ಮೋದಿ ನೋಡಿ ಪುಳಕಿತರಾದರು. ದಾರಿಯುದ್ಧಕ್ಕೂ ಹೂಮಳೆ ಸುರಿಸಿದರು. ಹೂ ಹಾಕುವಾಗ ಅಭಿಮಾನಿಯೊಬ್ಬನ ಮೊಬೈಲ್ ಅಚಾನಕ್ ತೂರಿ ಬಂದ ಘಟನೆಯೂ ನಡೆಯಿತು. ಮೊಬೈಲ್ ಪ್ರಚಾರ ವಾಹನದ ಮೇಲ್ಗಡೆ ಬಿತ್ತು.
ಗನ್‍ಹೌಸ್ ಸರ್ಕಲ್‍ನಿಂದ ಆರಂಭವಾದ ಪವರ್ ಶೋ, ಕಾಪೋರೇಷನ್ ಸರ್ಕಲ್, ಸಿಟಿ ಬಸ್ ನಿಲ್ದಾಣ, ಕೆ.ಆರ್ ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದ ಸರ್ಕಲ್, ಮಿಲೀನಿಯಂ ಸರ್ಕಲ್‍ನಲ್ಲಿ ಸಾಗಿ ಅಂತ್ಯವಾಯಿತು. ಮೋದಿ ಜೊತೆ ಈಶ್ವರಪ್ಪ, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ರಾಮದಾಸ್ ಇದ್ದರು. ಈ ರೋಡ್ ಶೋ ಮೂಲಕ, ಸಿದ್ದರಾಮಯ್ಯ ಸೇರಿದಂತೆ 3 ಜಿಲ್ಲೆಗಳಿಗೆ ಮೋದಿ ಸಂದೇಶ ರವಾನಿಸಿದರು. ನಾಳೆ ಮೋದಿ ಪ್ರಚಾರಕ್ಕೆ ವಿರಾಮ ಇದ್ದು, ನಾಡಿದ್ದು ಮತ್ತೆ ರಾಜ್ಯಕ್ಕೆ ಬರಲಿದ್ದಾರೆ.
ರಾಜ್ಯದಲ್ಲಿ ಈಗಿನಂತೆ ಎಪ್ರಿಲ್ 7 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 9…
ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ…
ಮ್ಯಾನ್ಮಾರ್ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ…
ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು…
ಬದುಕಿನ ದೀವಿಗೆ ಜ್ಞಾನ. ಅದು ಜ್ಞಾನ ದೀವಿಗೆ. ಜ್ಞಾನಕ್ಕೆ ಮುಪ್ಪಿಲ್ಲ, ಸಾವಿಲ್ಲ. ಅದು…
ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್ಗೆ…