ಡಿಕೆಶಿ ನಾಮಪತ್ರ ಸ್ವೀಕೃತಿ – ಮುಂದಿನ ಕ್ರಮಕ್ಕೆ ಬಿಜೆಪಿ ಚಿಂತನೆ

April 22, 2023
9:00 AM

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಾಮಪತ್ರದ ವಿರುದ್ಧ ಸಲ್ಲಿಸಿದ್ದ ಆಕ್ಷೇಪಣೆಯನ್ನು ಪರಿಶೀಲನೆ ಮಾಡಿ ಚುನಾವಣಾಧಿಕಾರಿಗಳು ನಾಮಪತ್ರವನ್ನು ಸ್ವೀಕಾರ ಮಾಡಿದ್ದಾರೆ. ಈ ಬಗ್ಗೆ ನಮ್ಮ ಬಿಜೆಪಿ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಪರ ವಕೀಲ ಎಲ್.ಎನ್ ಹೆಗ್ಗಡೆ ತಿಳಿಸಿದ್ದಾರೆ.

Advertisement
Advertisement

Advertisement

ರಾಮನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರ ಆದಾಯ ತೆರಿಗೆ ವಿಚಾರದಲ್ಲಿ ಸಾಕಷ್ಟು ತಪ್ಪುಗಳಿರುವುದು ಗಮನಕ್ಕೆ ಬಂದಿತ್ತು. ಅಫಿಡವಿಟ್‍ನಲ್ಲಿ ಕೆಲವೊಂದು ಕಡೆ ನಿಲ್ ಎಂದು ತೋರಿಸಿದ್ದಾರೆ. ಸರ್ಕಾರಕ್ಕೆ ಕಟ್ಟ ಬೇಕಾದ ತೆರಿಗೆಯನ್ನು ಕಟ್ಟದೆ ಉಳಿಸಿಕೊಂಡಿದ್ದಾರೆ. ಆದರೆ ಚುನಾವಣಾಧಿಕಾರಿಗಳು ಅದನ್ನ ಗಮನಕ್ಕೆ ತೆಗೆದುಕೊಂಡಿರಲಿಲ್ಲ. ನಾವು ಅದನ್ನು ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ. ಈ ಬಗ್ಗೆ ಆಕ್ಷೇಪಣಾ ಅರ್ಜಿಸಲ್ಲಿಸಿದ್ದೆವು ಎಂದಿದ್ದಾರೆ.

ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ಚುನಾವಣಾಧಿಕಾರಿಗಳು ಪರಿಶೀಲನೆ ಮಾಡಿ ನಾಮಪತ್ರ ಸ್ವೀಕಾರ ಮಾಡಿದ್ದಾರೆ. ಈ ವಿಚಾರದಲ್ಲಿ ಚುನಾವಣಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿರುತ್ತದೆ. ಈ ಬಗ್ಗೆ ನಮ್ಮ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :
May 19, 2024
5:57 PM
by: The Rural Mirror ಸುದ್ದಿಜಾಲ
ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?
May 19, 2024
5:28 PM
by: The Rural Mirror ಸುದ್ದಿಜಾಲ
ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?
May 19, 2024
5:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror