ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಾಮಪತ್ರದ ವಿರುದ್ಧ ಸಲ್ಲಿಸಿದ್ದ ಆಕ್ಷೇಪಣೆಯನ್ನು ಪರಿಶೀಲನೆ ಮಾಡಿ ಚುನಾವಣಾಧಿಕಾರಿಗಳು ನಾಮಪತ್ರವನ್ನು ಸ್ವೀಕಾರ ಮಾಡಿದ್ದಾರೆ. ಈ ಬಗ್ಗೆ ನಮ್ಮ ಬಿಜೆಪಿ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಪರ ವಕೀಲ ಎಲ್.ಎನ್ ಹೆಗ್ಗಡೆ ತಿಳಿಸಿದ್ದಾರೆ.
ರಾಮನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರ ಆದಾಯ ತೆರಿಗೆ ವಿಚಾರದಲ್ಲಿ ಸಾಕಷ್ಟು ತಪ್ಪುಗಳಿರುವುದು ಗಮನಕ್ಕೆ ಬಂದಿತ್ತು. ಅಫಿಡವಿಟ್‍ನಲ್ಲಿ ಕೆಲವೊಂದು ಕಡೆ ನಿಲ್ ಎಂದು ತೋರಿಸಿದ್ದಾರೆ. ಸರ್ಕಾರಕ್ಕೆ ಕಟ್ಟ ಬೇಕಾದ ತೆರಿಗೆಯನ್ನು ಕಟ್ಟದೆ ಉಳಿಸಿಕೊಂಡಿದ್ದಾರೆ. ಆದರೆ ಚುನಾವಣಾಧಿಕಾರಿಗಳು ಅದನ್ನ ಗಮನಕ್ಕೆ ತೆಗೆದುಕೊಂಡಿರಲಿಲ್ಲ. ನಾವು ಅದನ್ನು ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ. ಈ ಬಗ್ಗೆ ಆಕ್ಷೇಪಣಾ ಅರ್ಜಿಸಲ್ಲಿಸಿದ್ದೆವು ಎಂದಿದ್ದಾರೆ.
ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ಚುನಾವಣಾಧಿಕಾರಿಗಳು ಪರಿಶೀಲನೆ ಮಾಡಿ ನಾಮಪತ್ರ ಸ್ವೀಕಾರ ಮಾಡಿದ್ದಾರೆ. ಈ ವಿಚಾರದಲ್ಲಿ ಚುನಾವಣಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿರುತ್ತದೆ. ಈ ಬಗ್ಗೆ ನಮ್ಮ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…