ಖರ್ಗೆ ತವರಿನಲ್ಲಿ ಮೋದಿ ದಂಡಯಾತ್ರೆ – 25 ಕ್ಷೇತ್ರದ ಮೇಲೆ ಬಿಜೆಪಿ ಕಣ್ಣು

May 2, 2023
9:56 AM

ಚುನಾವಣೆಗೆ ಇನ್ನು ಕೇವಲ 8 ದಿನವಷ್ಟೇ ಬಾಕಿಯಿದ್ದು, ಇಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ಮೋದಿ ಎಂಟ್ರಿ ನೀಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪ್ರಭಾವ ಇರುವ ಕಲ್ಯಾಣ ಕರ್ನಾಟಕದಲ್ಲಿ ಮೋದಿ ಪ್ರಚಾರದ ಮೂಲಕ ಧೂಳೆಬ್ಬಿಸಲು ಬಿಜೆಪಿ ಪ್ಲಾನ್ ಮಾಡಿದೆ.

Advertisement
Advertisement
Advertisement

ಕಲಬುರಗಿ ರೋಡ್ ಶೋ ವೇಳೆ ಖರ್ಗೆಗೆ ಮತ್ತೆ ಕೌಂಟರ್ ಕೊಡಲು ಮೋದಿ ಪ್ಲಾನ್ ಮಾಡಿದ್ದು ಮತ್ತೊಮ್ಮೆ ವಿಷಸರ್ಪ ಹೇಳಿಕೆಗೆ ಮೋದಿಯಿಂದ ತಿರುಗೇಟು ನಿರೀಕ್ಷೆ ಇದೆ. ಕಲ್ಯಾಣ ಕರ್ನಾಟಕದಲ್ಲಿ ಗರಿಷ್ಠ ಕ್ಷೇತ್ರಗಳನ್ನು ವಶಕ್ಕೆ ಪಡೆಯಲು ಬಿಜೆಪಿ ಪಣ ತೊಟ್ಟಿದೆ. ಈ ಭಾಗದಲ್ಲಿ ಲಿಂಗಾಯತರ ಪ್ರಾಬಲ್ಯದ ಜತೆಗೆ ಎಸ್‌ಸಿ, ಎಸ್‌ಟಿ ಇತರೇ ಹಿಂದುಳಿದ ವರ್ಗಗಳ ಅಹಿಂದ ಮತಗಳು ನಿರ್ಣಾಯಕವಾಗಲಿದೆ.

Advertisement

ಇಂದು ಕಲಬುರಗಿ ಬಳಿಕ, ಮೇ 6 ರಂದು ಚಿತ್ತಾಪುರಗಳಲ್ಲಿ ಮೋದಿ ಮತಬೇಟೆ ನಡೆಸಲಿದ್ದಾರೆ. ಕಲ್ಯಾಣ ಜಿಲ್ಲೆಗಳ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ನ 25 ಕೋಟೆಗಳ ವಶಕ್ಕೆ ಬಿಜೆಪಿ ತಂತ್ರ ಹೂಡಿದೆ. ಹಳೇ ಮೈಸೂರು ಬಳಿಕ ಕಲ್ಯಾಣ ಕರ್ನಾಟಕವೇ ನಮೋ ಟಾರ್ಗೆಟ್ ಆಗಿದೆ. ಕಲ್ಯಾಣ ಕರ್ನಾಟಕದ ಹಿನ್ನೆಡೆಯೂ ಬಹುಮತ ತಲುಪಲು ಅಡ್ಡಿಯಾಗಿತ್ತು.ಹೀಗಾಗಿ ಕಲ್ಯಾಣ ಭಾಗದದಲ್ಲಿ ಕಾಂಗ್ರೆಸ್ ಮತ ಬುಟ್ಟಿಗೆ ಮೋದಿ ಕೈಹಾಕಿದ್ದಾರೆ.

ಪ್ರಸ್ತುತ ಕಲ್ಯಾಣ ಕರ್ನಾಟಕದಲ್ಲಿ 40 ಕ್ಷೇತ್ರಗಳಿದ್ದು ಪ್ರಸ್ತುತ 17 ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಕನಿಷ್ಟ 25 ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ.

Advertisement

ಎಲ್ಲಿ ಕಾರ್ಯಕ್ರಮ?
ಇಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಹೊಸಪೇಟೆ, ಸಂಜೆ 4 ಗಂಟೆಗೆ ರಾಯಚೂರಿನ ಸಿಂಧನೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30ಕ್ಕೆ ಕಲಬುರಗಿಯಲ್ಲಿ ರೋಡ್‌ ಶೋ ನಡೆಯಲಿದೆ.

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ
ಆದರ್ಶ ಜೀವನ ಮತ್ತು ಪರಿಸರ ಸ್ನೇಹಿ ನೀತಿ ತಿಳಿಸುವ ಮಂಗಟ್ಟೆ ಹಕ್ಕಿಗಳು…
April 18, 2024
4:46 PM
by: The Rural Mirror ಸುದ್ದಿಜಾಲ
ಮರುಭೂಮಿ ನಾಡು ದುಬೈನಲ್ಲಿ 75 ವರ್ಷಗಳಲ್ಲೇ ದಾಖಲೆ ಮಳೆ…! | ಪ್ರವಾಹಕ್ಕೆ UAE ತತ್ತರ |
April 18, 2024
3:49 PM
by: The Rural Mirror ಸುದ್ದಿಜಾಲ
ಎಚ್ಚರ….. ತಾಯಂದಿರೇ ನಿಮ್ಮ ಮಕ್ಕಳಿಗೆ ಸೆರೆಲಾಕ್ ತಿನ್ನಿಸುತ್ತೀರಾ..? | ಬಯಲಾಯ್ತು ಶಾಕಿಂಗ್ ನ್ಯೂಸ್…! | ವರದಿ ಬಹಿರಂಗದ ಬಳಿಕ ನೆಸ್ಲೆ ಪ್ರತಿಕ್ರಿಯೆ ಏನು..?
April 18, 2024
3:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror