ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿನ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸಿದ್ದಾರೆ.
ನೂತನ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಹೈಕಮಾಂಡ್ ಕೆಲ ಸೂತ್ರಗಳನ್ನು ಸಿದ್ಧಪಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ್ ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್ ಕನುಗೋಲು ಸೇರಿ ಸಚಿವರ ಶಾರ್ಟ್ ಲಿಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಸರಿಯಾಗಿ ಕಾರ್ಯನಿರ್ವಹಿಸದವರಿಗೆ ಸ್ಥಾನ ನೀಡಬಾರದು, ಈ ಬಾರಿ ಉತ್ತಮ ಸರ್ಕಾರ ನೀಡಬೇಕು ಎಂದು ಚರ್ಚೆ ನಡೆದಿದ್ದು, ಯುವ ಶಾಸಕರಿಗೆ ಹೆಚ್ಚಿನ ಅವಕಾಶ, ಲೋಕಸಭೆ ಚುನಾವಣೆ ದೃಷ್ಟಿಯಿಂದ ಸಂಪುಟ ರಚನೆ, ಪ್ರಣಾಳಿಕೆ ಸಮರ್ಥವಾಗಿ ಜಾರಿ ಮಾಡುವವರಿಗೆ ಆದ್ಯತೆ ನೀಡಲಾಗಿದೆ ಎನ್ನಲಾಗಿದೆ.
ಒಟ್ಟಿನಲ್ಲಿ ಸಿಎಂ ಆಯ್ಕೆ ಬೆನ್ನಲ್ಲೇ ಸಚಿವ ಸಂಪುಟ ರಚನೆ ದೊಡ್ಡ ಸವಾಲ್ ಆಗಿದ್ದು, ಯಾವ ರೀತಿಯಾಗಿ ಸಚಿವ ಸ್ಥಾನ ಹಂಚಿಕೆ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…