ಸಿಎಂ, ಸಚಿವರು, ಶಾಸಕರನ್ನು ಬದಲಾಯಿಸೋ ಧೈರ್ಯ ಮೋದಿಗೆ ಮಾತ್ರ ಇದೆ – ಸಿಎಂ ಬೊಮ್ಮಾಯಿ

April 17, 2023
10:40 AM

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಬಂಡಾಯ ಭುಗಿಲೆದಿದೆ. ಹಲವು ನಾಯಕರು ಪಕ್ಷ ತೆರೆದು ಹೋಗುತ್ತಿದ್ದಾರೆ. ಈ ನಡುವೆ ಡ್ಯಾಮೇಜ್​ ಕಂಟ್ರೋಲ್ ಮುಂದಾಗಿರುವ ಬಿಜೆಪಿ  ನಾಯಕರು ಇಂದು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಈ ನಡುವೆ ಹೊಸಪೇಟೆಯಲ್ಲಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪಕ್ಷ ಬಿಟ್ಟು ಹೋಗಿರುವುದಕ್ಕೆ ಮುಂದೆ ಪಶ್ಚಾತ್ತಾಪ ಪಡುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲದೆ, ಶಾಸಕರು, ಸಚಿವರು ಸೇರಿದಂತೆ ಸಿಎಂ ಬದಲಾವಣೆ ಮಾಡುವ ಧೈರ್ಯ ಮೋದಿಗೆ ಮಾತ್ರ ಇದೆ ಎಂದು ಹೇಳಿದ್ದಾರೆ.

ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿದ್ದಾರೆ

ಜಗದೀಶ್​​ ಶೆಟ್ಟರ್​​ ಅವರ ಫೈಟ್​ ಎಲ್ಲಿ ಹೋಯ್ತು ಅನ್ನೋದು ಮುಖ್ಯ ಅಲ್ಲ, ಆದರೆ ಡೆಸ್ಟಿನೇಷನ್ ಮುಖ್ಯ. ಬಿಜೆಪಿಯಲ್ಲಿ ಮೋದಿಯವರು ಕಾಲ ಕಾಲಕ್ಕೆ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ. ಶಾಸಕರು, ಸಚಿವರು. ಸಿಎಂ ಬದಲಾವಣೆ ಮಾಡೋ ಧೈರ್ಯ ಮೋದಿ ಮತ್ತು ಬಿಜೆಪಿಗೆ ಮಾತ್ರ ಇದೆ. ಹಲವಾರು ಸರ್ವೆ ಮತ್ತು ಬೇರೆ ಬೇರೆ ಕಾರಣಗಳಿಗೆ ಬದಲಾವಣೆ ಆಗಿದೆ. ಪಕ್ಷಕ್ಕೆ ಅದನ್ನ ನಿಭಾಯಿಸುವ ಶಕ್ತಿ ಇದೆ. ಕೆಲವು ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿ ನಿವೃತ್ತಿ ಹೊಂದಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

  ಆನಂದ್ ಸಿಂಗ್ ಅವರಿಗೆ ವಯಸ್ಸು ಇತ್ತು. ಅವರ ಜೊತೆ ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಎಸ್ ವೈ ಯಡಿಯೂರಪ್ಪ ಅವರು ಯುವಕರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಶೆಟ್ಟರ್ ಸಹ ಯುವಕರಿಗೆ ಅವಕಾಶ ಮಾಡಿಕೊಡಬೇಕಾಗಿತ್ತು. ಅವರಿಗೆ ಪಕ್ಷ ದೆಹಲಿ ಮಟ್ಷದಲ್ಲಿ ದೊಡ್ಡ ಜವಾಬ್ದಾರಿ ಕೊಡುವ ಭರವಸೆ ನೀಡಿದ್ದರು. ಪಕ್ಷ ಅವರಿಗೆ ದೊಡ್ಡ ಸ್ಥಾನಮಾನಗಳನ್ನ ಕೊಟ್ಟಿದೆ. ಅವರು ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಯಾರೇ ಪಕ್ಷ ಬಿಟ್ಟು ಹೋದರೂ ಅವರಿಂದ ಯಾವುದೇ ನಷ್ಟವಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror