Advertisement
ಸುದ್ದಿಗಳು

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

Share

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಇತ್ತೀಚೆಗೆ ಪ್ರಕಟಿಸಿರುವ ವಿದ್ಯುತ್ ದರ ಏರಿಕೆ ಹಾಗೂ ಹಿಂಬದಿ ಬಿಲ್ಲಿಂಗ್ (Back Billing) ಕ್ರಮದ ವಿರುದ್ಧ ಕೈಗಾರಿಕಾ ವಲಯದಲ್ಲಿ ತೀವ್ರ ಆತಂಕ ವ್ಯಕ್ತವಾಗಿದೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ಅಧ್ಯಕ್ಷೆ ಉಮಾ ರೆಡ್ಡಿ ಈ ಬಗ್ಗೆ ಪ್ರತಿಕ್ರಿಯಿಸಿ, “ಈ ನಿರ್ಧಾರವು ರಾಜ್ಯದ ಕೈಗಾರಿಕಾ ವಲಯಕ್ಕೆ, ವಿಶೇಷವಾಗಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಗಂಭೀರ ಆಘಾತ ನೀಡಲಿದೆ” ಎಂದು ಹೇಳಿದ್ದಾರೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ಗೆ 56 ಪೈಸೆ ಹಾಗೂ ಸೆಸ್ಕ್ ವ್ಯಾಪ್ತಿಯಲ್ಲಿ 16 ಪೈಸೆಯಷ್ಟು ದರ ಏರಿಕೆಯಾಗಿದ್ದು, ಇದರ ಮೇಲೆ ಶೇಕಡ 9ರಷ್ಟು ವಿದ್ಯುತ್ ತೆರಿಗೆ ವಿಧಿಸಿರುವುದು ಕೈಗಾರಿಕೆಗಳ ಮೇಲಿನ ಆರ್ಥಿಕ ಹೊರೆ ಇನ್ನಷ್ಟು ಹೆಚ್ಚಿಸಿದೆ. ಈಗಾಗಲೇ ಉತ್ಪಾದನಾ ವೆಚ್ಚ, ಕಾರ್ಮಿಕ ವೆಚ್ಚ ಹಾಗೂ ಮಾರುಕಟ್ಟೆ ಸ್ಪರ್ಧೆಯಿಂದ ಸಂಕಷ್ಟದಲ್ಲಿರುವ MSME ವಲಯಕ್ಕೆ ಈ ನಿರ್ಧಾರ ಮತ್ತೊಂದು ದೊಡ್ಡ ಸವಾಲಾಗಿ ಪರಿಣಮಿಸಿದೆ.

ಉದ್ಯಮಿಗಳು ಈ ದರ ಏರಿಕೆಯಿಂದ ಉತ್ಪಾದನಾ ವೆಚ್ಚ ಹೆಚ್ಚಾಗಿ, ಅಂತಿಮವಾಗಿ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಸಂಭವಿಸಬಹುದು ಎಂದು ಎಚ್ಚರಿಸಿದ್ದಾರೆ. ಇದರಿಂದ ಸ್ಪರ್ಧಾತ್ಮಕತೆ ಕಡಿಮೆಯಾಗುವ ಸಾಧ್ಯತೆಯೂ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The recent electricity tariff hike and implementation of back billing by the Karnataka Electricity Regulatory Commission have raised serious concerns among industry leaders. FKCCI President Uma Reddy warned that the decision will heavily impact small and medium enterprises (MSMEs), increasing their financial burden due to higher per-unit costs and additional electricity taxes, potentially affecting production costs and competitiveness.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

14 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

14 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

15 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

15 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

15 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

1 day ago