ಬೇಸಗೆಯಲ್ಲಿ ಬಿಸಿಲಿನ ಕಾವು ಹೆಚ್ಚಾಗುತ್ತಿದ್ದಂತೆಯೇ ಕಾಡ್ಗಿಚ್ಚು ಪ್ರಕರಣ ಹೆಚ್ಚಾಗುತ್ತಿದೆ. ಈ ಬಾರಿ ಇದುವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042 ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ.
ಅರಣ್ಯ ಕಾಡ್ಗಿಚ್ಚು ಹೆಚ್ಚಾಗುತ್ತಿದೆ. ಅರಣ್ಯ ಇಲಾಖೆಯ ಎಚ್ಚರ, ಮುಂಜಾಗ್ರತಾ ಕ್ರಮಗಳ ನಡುವೆಯೂ ಕಾಡ್ಚಿಚ್ಚು ಪ್ರಕರಣಗಳು ಸಂಭವಿಸುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ ಎಂದು ವರದಿಯಾಗಿದೆ. 627 ಕಾಡ್ಗಿಚ್ಚು ಪ್ರಕರಣಗಳು ಸೇರಿಕೊಂಡಿವೆ. ಕರ್ನಾಟಕದಲ್ಲಿ ಕಾಡ್ಗಿಚ್ಚು ನಿವಾರಣೆಗೆ ಕೇಂದ್ರ ಸರ್ಕಾರ ಕೇವಲ 3 ಕೋಟಿ ರೂ. ನೀಡಿದೆ. ಈ ಪೈಕಿ ಮೊದಲ ಹಂತದಲ್ಲಿ ಕೇವಲ 60 ಲಕ್ಷ ರೂ. ಬಿಡುಗಡೆಯಾಗಿದ್ದು, ಎರಡನೇ ಕಂತಿನ ಹಣ ಬಿಡುಗಡೆ ಮಾಡುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
2022 ರ ಜನವರಿಯಿಂದ ಮಾರ್ಚ್ ವರೆಗೆ 2,262 ಬೆಂಕಿ ಘಟನೆಗಳು ಸಂಭವಿಸಿದ್ದವು. 2021 ರ ಇದೇ ಅವಧಿಯಲ್ಲಿ 2,323 ಅಗ್ನಿ ಅವಘಡ ಪ್ರಕರಣಗಳು ಸಂಭವಿಸಿವೆ ಎಂದು ತಿಳಿದುಬಂದಿದೆ.