ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಸ್ವಾತಂತ್ರ‍್ಯ ಹೋರಾಟದಲ್ಲಿ ಕರ್ನಾಟಕದ ಪಾತ್ರವನ್ನು ಪ್ರದರ್ಶಿಸಲು ಪ್ರವಾಸೋದ್ಯಮ ಇಲಾಖೆಯು ಮುಂದಾಗಿದೆ. ಚಳುವಳಿಗೆ ಮಹತ್ವದ ಕೊಡುಗೆ ನೀಡಿದ ಪ್ರಸಿದ್ಧ ಹಾಗೂ ಕಡಿಮೆ ಪ್ರಸಿದ್ಧ ಸ್ಥಳಗಳ ವಿವರಗಳನ್ನು ಹಂಚಿಕೊಳ್ಳಲು ಜನರನ್ನು ಕೇಳುತ್ತಿದೆ.
ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಂಧು ಬಿ ರೂಪೇಶ್ ಅವರು ಈ ಮಾಹಿತಿ ಕೋರಿದದ್ದಾರೆ. ಇದಕ್ಕಾಗಿ ಸಾರ್ವಜನಿಕ ಸಹಭಾಗಿತ್ವವನ್ನು ಕೋರಲಾಗುತ್ತಿದ್ದು, ಪ್ರವಾಸೋದ್ಯಮ ನಕ್ಷೆಯಲ್ಲಿ ಗುರುತಿಸಲಾಗುವ ಮಾಹಿತಿಯನ್ನು ಜನರು ಇಲಾಖೆಯೊಂದಿಗೆ ಹಂಚಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಪ್ರವಾಸೋದ್ಯಮ ದಿನದ ಅಂಗವಾಗಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಇಲಾಖೆಯು ಮಂಗಳವಾರ ಆಯೋಜಿಸಿದ್ದ ಇಲಾಖೆಯು ಮಂಗಳವಾರ ಆಯೋಜಿಸಿದ್ದ ‘ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಕರ್ನಾಟಕದ ಪಾತ್ರ’ ಕುರಿತು ವೆಬ್‌ನಾರಿನಲ್ಲಿ ವಿವಿ ನಿವೃತ್ತ ಪ್ರಾಧ್ಯಪಕರು ಹಾಗೂ ಇತಿಹಾಸ ತಜ್ಞರು ಪಾಲ್ಗೊಂಡಿದ್ದರು.
ಇಲಾಖೆಯು ಕರ್ನಾಟಕದಲ್ಲಿ 770 ಪ್ರವಾಸೋದ್ಯಮ ತಾಣಗಳನ್ನು ಪಟ್ಟಿ ಮಾಡಿದೆ, ಅದರಲ್ಲಿ 25 ಕಡಿಮೆ ಪ್ರಸಿದ್ಧ ಸ್ಥಳಗಳು ಎಂದು ಗುರುತು ಮಾಡಲಾಗಿದೆ. ಸಿದ್ಧಪಡಿಸಲಾಗುತ್ತಿರುವ ಕರಪತ್ರದಲ್ಲಿ ಸ್ವಾತಂತ್ರ‍್ಯ ಹೋರಾಟದ ಭಾಗವಾಗಿರುವುದನ್ನು ಸೇರಿಸಲಾಗುವುದು ಎಂದು ಹೇಳಿದ್ದಾರೆ.
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ…
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ…