Advertisement
MIRROR FOCUS

ಕರ್ನಾಟಕದ ಜಿಐ ಉತ್ಪನ್ನಗಳ ರಫ್ತು | APEDAಗೆ ಪಿಯೂಷ್ ಗೋಯಲ್ ಶ್ಲಾಘನೆ

Share

ಭಾರತದ ಕೃಷಿ ರಫ್ತುಗಳನ್ನು ಬಲಪಡಿಸುವ ದಿಸೆಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಕರ್ನಾಟಕದ ಮೂರು ಜಿಐ (Geographical Indication) ಟ್ಯಾಗ್ ಹೊಂದಿದ ಕೃಷಿ ಉತ್ಪನ್ನಗಳು ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು ಮಾಡಲಾಗಿದೆ.

ಈ ಕುರಿತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.  ಅವರು, “APEDA ಭಾರತದ ಕೃಷಿ ರಫ್ತುಗಳನ್ನು ನಿರಂತರವಾಗಿ ಬಲಪಡಿಸುತ್ತಿದೆ. ಈ ನಿಟ್ಟಿನಲ್ಲಿ, ಕರ್ನಾಟಕದ ಮೂರು ಜಿಐ-ಟ್ಯಾಗ್ ಉತ್ಪನ್ನಗಳು — ನಂಜನಗೂಡು ರಸಬಾಳೆ ಬಾಳೆಹಣ್ಣು, ಮೈಸೂರು ವೀಳ್ಯದ ಎಲೆಗಳು ಮತ್ತು ಇಂಡಿ ನಿಂಬೆ — ಮಾಲ್ಡೀವ್ಸ್‌ಗೆ ವಿಮಾನದ ಮೂಲಕ ರಫ್ತು ಮಾಡಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಸಚಿವರು ತಮ್ಮ ಪೋಸ್ಟ್‌ನಲ್ಲಿ ಮುಂದುವರಿಸಿ,  “ಈ ಉಪಕ್ರಮವು ಭಾರತದ ಕೃಷಿ ರಫ್ತುಗಳನ್ನು ಹೆಚ್ಚಿಸುವುದು, ರೈತರಿಗೆ ಬೆಂಬಲ ಒದಗಿಸುವುದು, ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ಪ್ರವೇಶ ವಿಸ್ತರಿಸುವುದು ಮತ್ತು ಭಾರತದ ಶ್ರೀಮಂತ ಜಿಐ ಪರಂಪರೆಯನ್ನು ಜಾಗತಿಕವಾಗಿ ಉತ್ತೇಜಿಸುವ APEDAಯ ನಿರಂತರ ಪ್ರಯತ್ನಗಳ ಪ್ರತಿಬಿಂಬವಾಗಿದೆ” ಎಂದು ಹೇಳಿದ್ದಾರೆ.

ಈ ರಫ್ತು ಪ್ರಕ್ರಿಯೆ ಕರ್ನಾಟಕದ ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಅವಕಾಶಗಳನ್ನು ತೆರೆದಿದ್ದು, ಜಿಐ ಟ್ಯಾಗ್ ಪಡೆದ ಬೆಳೆಗಳಿಗೆ ಹೆಚ್ಚುವರಿ ಮೌಲ್ಯ ಸಿಗುವ ನಿರೀಕ್ಷೆ ಮೂಡಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಫೋಟೋ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್
ಮೂಲ: ಎಕ್ಸ್ (X)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

10 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

11 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

12 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

12 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

2 days ago